ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ- ಮಗು ಸಾವು
ಗ್ಯಾಸ್ ಗೀಸರ್ಗಳ ಅವೈಜ್ಞಾನಿಕ ಬಳಕೆ ಅಥವಾ ಸೋರಿಕೆ (Gas Geyser Leak) ಹಲವು ಕಡೆ ಸಾವುಗಳಿಗೆ ಕಾರಣವಾಗುತ್ತಿದೆ. ಇತ್ತೀಚೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸ್ನಾನಕ್ಕೆ ಇಳಿದ ಅಕ್ಕ- ತಂಗಿ ಗ್ಯಾಸ್ ಗೀಸರ್ ಸೋರಿಕೆಯಿಂದ ಮೃತಪಟ್ಟಿದ್ದರು. ಇದೀಗ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ತಾಯಿ ಹಾಗೂ ಮಗು ಇದರಿಂದಾಗಿ ಮೃತಪಟ್ಟಿದ್ದಾರೆ.