ನಮ್ಮಲ್ಲಿ ತಮಿಳುನಾಡಿಗೆ ಬಿಡುವಷ್ಟು ಕಾವೇರಿ ನೀರಿಲ್ಲ: ಎಂ.ಬಿ. ಪಾಟೀಲ್
MB Patil: ಚೆನ್ನಾಗಿ ಮಳೆಯಾದರೆ ಕಾವೇರಿ ನೀರಿನ ಹಂಚಿಕೆಯಲ್ಲಿ ಯಾವ ಸಮಸ್ಯೆಯೂ ಬರುವುದಿಲ್ಲ. ಅಂತಹ ವರ್ಷಗಳಲ್ಲಿ ನಾವು ನಿಗದಿತ 177 ಟಿಎಂಸಿಗಿಂತ ಹೆಚ್ಚು ನೀರನ್ನೇ ತಮಿಳುನಾಡಿಗೆ ಹರಿಸುತ್ತಿದ್ದೇವೆ. ಆದರೆ ಬರಗಾಲ ಬಂದಾಗ ಯಾವ ಸಂಕಷ್ಟ ಸೂತ್ರವೂ ಇಲ್ಲ. ಇದಕ್ಕೆಲ್ಲ ಮೇಕೆದಾಟು ಜಲಾಶಯ ನಿರ್ಮಾಣವೇ ಉತ್ತರ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.