Bopanna Retirement : ಕೊಡಗಿನ ಕಲಿ ರೋಹನ್ ಬೋಪಣ್ಣ ಟೆನಿಸ್ ನಿವೃತ್ತಿ
ಬೋಪಣ್ಣ ಅವರು ಒಟ್ಟು ಎರಡು ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆದ್ದಿದ್ದಾರೆ. 2024 ರಲ್ಲಿ ಮೆಲ್ಬರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ರೋಹನ್ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೊತೆಗೂಡಿ ಪುರುಷರ ಡಬಲ್ಸ್ ಪ್ರಶಸ್ತಿ ಜಯಿಸಿದ್ದರು. ಅಲ್ಲದೆ ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದರು. ಈ ಮೂಲ ಗ್ರ್ಯಾನ್‌ಸ್ಲಾಮ್ ಟೆನಿಸ್‌ನಲ್ಲಿ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ವಯಸ್ಸಿನ ಆಟಗಾರನೆಂಬ ಗೌರವಕ್ಕೂ ಅವರು ಪಾತ್ರರಾಗಿದ್ದರು.