ಹೆತ್ತವರನ್ನು ನೋಡಿಕೊಳ್ಳದಿದ್ದರೆ ಆಸ್ತಿಯಲ್ಲಿ ಮಕ್ಕಳಿಗೆ ಪಾಲಿಲ್ಲ
Assembly session: ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರಿಕರಿಗೆ ಇದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.