ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹ; ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸೇವಾ ಭದ್ರತೆಗೆ ಆಗ್ರಹಿಸಿ ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Tumkur News: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ʼʼಕುಮಾರಸ್ವಾಮಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಯೋಜನೆ ಮುಂದುವರಿಸುತ್ತೇವೆʼʼ: ಅಚ್ಚರಿಯ ಹೇಳಿಕೆ ನೀಡಿದ ಡಿ.ಕೆ. ಶಿವಕುಮಾರ್‌

ಎಚ್‌ಡಿಕೆ, ಬಿಎಸ್‌ವೈ, ಬೊಮ್ಮಾಯಿ ಅವರ ಆಲೋಚನೆ ಮುಂದುವರಿಸುತ್ತೇವೆ: ಡಿಕೆಶಿ

CM DK Shivakumar: ನಮ್ಮದು ಸಿದ್ದರಾಮಯ್ಯ ಅವರ ಸರ್ಕಾರದ ಮುಂದುವರಿದ ಭಾಗ. ಹೊಸ ಆಲೋಚನೆ ಹೊಂದಿದ್ದೇವೆ. ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಅವರ ಆಲೋಚನೆಯನ್ನು ನಾವು ಬಿಡದೆ ಮುಂದುವರಿಸುತ್ತೇವೆ. ಕುಮಾರಸ್ವಾಮಿ ಅವರ ಬಿಡದಿ, ದೇವೇಗೌಡರ ನೈಸ್ ಯೋಜನೆಯನ್ನು ನಾವು ಮುಂದುವರಿಸುತ್ತೇವೆ. ಈ ಯೋಜನೆಗಳಲ್ಲಿ ತಪ್ಪಾಗಿದ್ದರೆ ಸರಿ ಮಾಡೋಣ ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Massive fire at a plastic factory: ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಭೀಕರ ಅಗ್ನಿ ಅವಘಡ, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಭಸ್ಮ!

ಟಿಪ್ಪುನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಉರಿದ ಪ್ಲಾಸ್ಟಿಕ್ ಕಾರ್ಖಾನೆ!

ಘಟನೆ ಮಂಗಳವಾರ ಬೆಳಗಿನ ಜಾವ ಸುಮಾರು 6 ಗಂಟೆಯ ಸಮಯದಲ್ಲಿ ಚಿಂತಾಮಣಿ ನಗರದ ಟಿಪ್ಪುನಗರ ಬಡಾವಣೆಯಲ್ಲಿ ಸಂಭವಿಸಿದೆ. ಸದರಿ ಪ್ಲಾಸ್ಟಿಕ್ ಫ್ಯಾಕ್ಟರಿಯು ನಗರದ ಎಂ.ಜಿ. ರಸ್ತೆ ಯಲ್ಲಿರುವ ಫ್ರೆಂಡ್ಸ್ ಇಲಿಯಾಸ್ ಎಂಬುವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಫ್ಯಾಕ್ಟರಿಗೆ ವ್ಯಾಪಿ ಸಿದ್ದು, ಒಳಗಿದ್ದ ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ಇದರಿಂದ ಮಾಲಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ED raids in Gauribidanur: ಕೆಪಿಎಸ್ಸಿ ಹಗರಣದ ಆರೋಪ: ಗೌರಿಬಿದನೂರಿನಲ್ಲಿ ಅಭ್ಯರ್ಥಿಯ ತಂದೆ ಮನೆ ಮೇಲೆ ಇ.ಡಿ. ದಾಳಿ

ಕೆಪಿಎಸ್ಸಿ ಹಗರಣದ ಆರೋಪ: ಗೌರಿಬಿದನೂರಿನಲ್ಲಿ ಇ.ಡಿ. ದಾಳಿ

ಕೆಪಿಎಸ್ಸಿ ಪರೀಕ್ಷೆಯಲ್ಲಿ ರಾಮಕೃಷ್ಣಪ್ಪ ಅವರ ಪುತ್ರ ಲೋಕೇಶ್ ಅವರು ರಾಜ್ಯಕ್ಕೆ 27ನೇ ಶ್ರೇಣಿ ಪಡೆದಿರುವ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆದಿದೆ ಎನ್ನಲಾಗಿದೆ. ಬೆಳಿಗ್ಗೆ ಸುಮಾರು 7 ಗಂಟೆಗೆ ಮನೆಗೆ ಆಗಮಿಸಿದ ಇ.ಡಿ. ಅಧಿಕಾರಿಗಳು ವಿವಿಧ ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಗಳನ್ನು ಪರಿಶೀಲಿಸಿದ್ದು, ಸತತ ಏಳೆಂಟು ಗಂಟೆಗಳಿಗೂ ಹೆಚ್ಚು ಕಾಲ ತನಿಖೆ ಮುಂದುವರಿದಿದೆ.

ʼʼಜೀವ ಭಯವಿದೆʼʼ: ಹನೂರು ಶೂಟೌಟ್‌ ವೇಳೆ ಪರಾರಿಯಾಗಿದ್ದ 4ನೇ ಆರೋಪಿ ಪ್ರತ್ಯಕ್ಷ; ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ ಹೇಳಿದ್ದೇನು?

ಹನೂರು ಶೂಟೌಟ್‌ ವೇಳೆ ಪರಾರಿಯಾಗಿದ್ದ 4ನೇ ಆರೋಪಿ ಪ್ರತ್ಯಕ್ಷ

Hanur Encounter: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿ ವೇಳೆ ಪರಾರಿಯಾಗಿದ್ದ ನಾಲ್ಕನೇ ಆರೋಪಿ ಮಹಿಮಾ ದಾಸ್ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೊ ಹರಿಯಬಿಟ್ಟಿದ್ದಾನೆ. ಜತೆಗೆ ತನಗೆ ಜೀವ ಬೆದರಿಕೆ ಇದೆ ಎಂದಿದ್ದಾನೆ.

Chinthamani News: ಕೋಮು ಸೌಹಾರ್ದತೆಗೆ ಮಾದರಿಯಾಗಲಿ ಮುರುಗಮಲ್ಲ ಉರುಸ್: ಅಧಿಕಾರಿಗಳ ಸಮ್ಮುಖದಲ್ಲಿ ಶಾಂತಿ ಸಭೆ

ಮುರುಗಮಲ್ಲ ಉರುಸ್‌ಗೆ ಸಕಲ ಸಿದ್ಧತೆ: ಕಮಿಟಿ ಸಭೆ ಯಶಸ್ವಿ

ಆಗಮಿಸುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಹಾಗೂ ಪಾರ್ಕಿಂಗ್ ವ್ಯವಸ್ಥೆ ಒದಗಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಕಾಣೆ ಯಾದ ಮಕ್ಕಳು ಅಥವಾ ವಸ್ತುಗಳ ಕುರಿತು ಮಾಹಿತಿ ನೀಡಲು ಧ್ವನಿವರ್ಧಕಗಳ ಸೌಲಭ್ಯವನ್ನು ಸದಾ ಸಿದ್ಧವಾಗಿಟ್ಟುಕೊಳ್ಳಬೇಕು.

ವಿರೋಧ ಪಕ್ಷದ ಧಿಕ್ಕಾರ ಆಳವಾದ ಗಾಯ ಮಾಡಿದೆ ಎಂದ ಸಿಎಂ ಡಿ.ಕೆ. ಶಿವಕುಮಾರ್‌

ವಿರೋಧ ಪಕ್ಷದ ಧಿಕ್ಕಾರ ಆಳವಾದ ಗಾಯ ಮಾಡಿದೆ ಎಂದ ಸಿಎಂ ಡಿ.ಕೆ. ಶಿವಕುಮಾರ್‌

CM DK Shivakumar: ನನಗೆ ಅಶ್ವಥ್ ನಾರಾಯಣ್, ವಿಜಯೇಂದ್ರ ಅವರ ತಂಡದ ಮೇಲೆ ಬಹಳ ಬೇಜಾರಾಗಿದೆ. ಎರಡು ಮೂರು ದಿನ ಕುಳಿತುಕೊಂಡು ನಾನು ಹೇಳುವುದನ್ನು ಕೇಳಿ ಎಂದು ಹೇಳಿದ್ದೇನೆ. ಆದರೂ ಸದನಕ್ಕೆ ಬರುತ್ತಿದ್ದಂತೆ ಧಿಕ್ಕಾರ ಎಂದು ಕೂಗಿ ನನ್ನ ಮನಸ್ಸಿಗೆ ಆಳವಾದ ಗಾಯ ಮಾಡಿದ್ದೀರಿ. ಈ ವಿಚಾರ ನನಗೆ ನಾಟಿದೆ ಎಂದು ಸಿಎಂ‌ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

BHIM QR ಮತ್ತು ಸೌಂಡ್ ಬಾಕ್ಸ್ ಅನ್ನು ಉತ್ತೇಜಿಸಲು ಕೆನರಾ ಬ್ಯಾಂಕ್‌ನ ಶಿವಮೊಗ್ಗ ವಲಯದಿಂದ ವ್ಯಾಪಾರಿಗಳ ಸಂಪರ್ಕ ಅಭಿಯಾನ

ಕೆನರಾ ಬ್ಯಾಂಕ್‌ನ ಶಿವಮೊಗ್ಗ ವಲಯದಿಂದ ವ್ಯಾಪಾರಿಗಳ ಸಂಪರ್ಕ ಅಭಿಯಾನ

ಮಣಿಪಾಲ ವೃತ್ತದ (Circle) ಪ್ರಧಾನ ವ್ಯವಸ್ಥಾಪಕರು ಮತ್ತು ವೃತ್ತ ಕಚೇರಿಯ ಮುಖ್ಯಸ್ಥ ಎಚ್. ಕೆ. ಗಂಗಾಧರ್ ಅವರ ಮಾರ್ಗದರ್ಶನದಲ್ಲಿ, ಕೆನರಾ ಬ್ಯಾಂಕ್‌ನ ಶಿವಮೊಗ್ಗ ವಲಯವು ತನ್ನ BHIM QR ಮತ್ತು ಹೊಸದಾಗಿ ಪರಿಚಯಿಸಲಾದ 'ಸೌಂಡ್ ಬಾಕ್ಸ್' (Sound Box) ಸೇವೆಗಳನ್ನು ಉತ್ತೇಜಿಸಲು ವ್ಯಾಪಾರಿಗಳೊಂದಿಗೆ ವ್ಯಾಪಕ ಸಂಪರ್ಕ ಸಾಧಿಸುವ ಅಭಿಯಾನ ನಡೆಸಿತು.

ಭಾರತ–ದಕ್ಷಿಣ ಆಫ್ರಿಕಾ ಬಲಿಷ್ಠ ಪಾಲುದಾರಿಕೆಗೆ ಒತ್ತು: BRICS ಪ್ರವಾಸೋದ್ಯಮ ಸಚಿವರ ಸಭೆಯಲ್ಲಿ ಭಾಗವಹಿಸಲು ದಕ್ಷಿಣ ಆಫ್ರಿಕಾದ ಸಚಿವೆ ಭೇಟಿ

ಭಾರತ–ದಕ್ಷಿಣ ಆಫ್ರಿಕಾ ಬಲಿಷ್ಠ ಪಾಲುದಾರಿಕೆಗೆ ಒತ್ತು

ದಕ್ಷಿಣ ಆಫ್ರಿಕಾದ ಪ್ರವಾಸೋದ್ಯಮ ಸಚಿವೆ ಪ್ಯಾಟ್ರಿಷಿಯಾ ಡಿ ಲಿಲ್ಲೆ ಅವರು, ಭಾರತದ 2026ರ BRICS ಅಧ್ಯಕ್ಷತೆಯ ಅಡಿಯಲ್ಲಿ ಭಾರತ ಆಯೋಜಿಸುತ್ತಿರುವ BRICS ಪ್ರವಾಸೋದ್ಯಮ ಸಚಿವರ ಸಭೆಯಲ್ಲಿ ದಕ್ಷಿಣ ಆಫ್ರಿಕಾವನ್ನು ಪ್ರತಿನಿಧಿಸಲು ಆ.21 ಮತ್ತು 22ರಂದು ಜೈಪುರಕ್ಕೆ ಭೇಟಿ ನೀಡಲಿದ್ದಾರೆ.

ಬೆಂಗಳೂರು ಅಭಿವೃದ್ಧಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು? ಮೋದಿ, ವಾಜಪೇಯಿ ಮಾತುಗಳನ್ನು ಉಲ್ಲೇಖಿಸಿದ ಸಿಎಂ Video

ಮೋದಿ, ವಾಜಪೇಯಿ ಮಾತುಗಳನ್ನು ಉಲ್ಲೇಖಿಸಿದ ಸಿಎಂ ಡಿಕೆಶಿ

CM D.K. Shivakumar: ರಾಜ್ಯ ರಾಜಧಾನಿ ಬೆಂಗಳೂರು ನಗರ ಹಾಗೂ ಕರ್ನಾಟಕದ ಅಭಿವೃದ್ಧಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಮಾತುಕತೆ ಮತ್ತು ಹಳೆಯ ಘಟನೆಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಮಾತನಾಡಿದ್ದಾರೆ. ಮುಂದಿನ 25 ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಬೆಳವಣಿಗೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.

Bengaluru Power Cut: ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ.19ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ  ಶಿವಶಂಕರಪ್ಪ ಸಾಹುಕಾರ್‌ ಮರುನೇಮಕಕ್ಕೆ ಹೈಕೋರ್ಟ್‌ ಸೂಚನೆ

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮರುನೇಮಕ

Shivashankarappa Sahukar: ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್‌. ಸಾಹುಕಾರ್‌ ಅವರಿಗೆ ಹೂಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದ್ದು, 7 ದಿನಗಳಲ್ಲಿ ಮರುನೇಮಕ ಮಾಡುವಂತೆ ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ಆದೇಶ ನೀಡಿದೆ.

ಬೆಂಗಳೂರು ಡಬಲ್‌ ಮರ್ಡರ್‌ ಮಿಸ್ಟ್ರಿ ಕಹಾನಿಗೆ ಕ್ಲೈಮ್ಯಾಕ್ಸ್‌; ಪ್ರಿಯಕರನ ಜತೆ ಸೇರಿ ಪತಿ, ಪುತ್ರನನ್ನೇ ಕೊಂದ ಕಿʼಲೇಡಿʼ

ಪ್ರಿಯಕರನ ಜತೆ ಸೇರಿ ಪತಿ, ಪುತ್ರನನ್ನೇ ಕೊಂದ ಮಹಿಳೆ ಅರೆಸ್ಟ್‌

Bengaluru News: ಬೆಂಗಳೂರಿನ ಚಿಕ್ಕಬಾವಣಾವರದ ಮನೆಯೊಂದರಲ್ಲಿ ಮೃತಪಟ್ಟ ಟೆಕ್ಕಿ ಮತ್ತು ಅವರ 5 ವರ್ಷದ ಪುತ್ರನ ನಿಗೂಢ ಸಾವಿನ ರಹಸ್ಯ ಬಯಲಾಗಿದೆ. ಮೃತರನ್ನು ಅಭಿನವ್‌ (38) ಹಾಗೂ ಅವರ ಪುತ್ರ ಯದುವೀರ್‌ (5) ಎಂದು ಗುರುತಿಸಲಾಗಿದೆ. ಅಭಿನವ್‌ ಅವರ ಪತ್ನಿ ಹರಿಣಿಯೇ ಈ ಹತ್ಯೆ ಮಾಡಿದ್ದಾಳೆ ಎನ್ನುವುದು ತಿಳಿದು ಬಂದಿದೆ.

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ ಆಯ್ಕೆ

ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಶಾಸಕ ಮಂಕಾಳ ವೈದ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ವಿಧಾನ ಪರಿಷತ್‌ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಆಯ್ಕೆಯಾಗಿದ್ದಾರೆ. ಉಪಸಭಾದ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳ  ವೈದ್ಯ ಅವರ ಹೆಸರನ್ನು ಅನುಮೋದಿಸಿದರು.

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇ.ಡಿ ದಾಳಿ; CRPF ಭದ್ರತೆಯಲ್ಲಿ 21 ಕಡೆ ಶೋಧ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇ.ಡಿ ದಾಳಿ

Shivashankarappa Sahukar: ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಶಿವಶಂಕರಪ್ಪ ಎಸ್‌.ಸಾಹುಕಾರ ಅವರ ನಿವಾಸ ಸೇರಿದಂತೆ ಒಟ್ಟು 21 ಕಡೆಗಳಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

ಹನೂರು ಎನ್‌ಕೌಂಟರ್‌ ಕೇಸ್‌; ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಸಾಕ್ಷ್ಯಗಳ ಮೇಲೆಯೇ ಅನುಮಾನ!

ಹನೂರು ಎನ್‌ಕೌಂಟರ್‌ ಕೇಸ್‌; ಅನುಮಾನ ಹುಟ್ಟಿದ ಅರಣ್ಯ ಇಲಾಖೆ ನಡೆ

Hanur encounter case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಕೇಸ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೃತ ಪೀಟರ್, ಆಂಥೋನಿ ಹಾಗೂ ಕುಮಾರ್ ಅವರ ಅಂತ್ಯಕ್ರಿಯೆ ನೇರವೇರಿದ ಬಳಿಕ ಅರಣ್ಯ ಇಲಾಖೆ ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ತನಿಖಾಧಿಕಾರಿಗಳಿ ಒಪ್ಪಿಸಿತ್ತು.

ರಾಜ್ಯದ ಜನತೆಗೆ ಮತ್ತೆ ಶಾಕ್‌; ಬಸ್ ಟಿಕೆಟ್ ದರ ಏರಿಕೆ ಸರ್ಕಾರದಿಂದ ಚಿಂತನೆ

ಬಸ್ ಟಿಕೆಟ್ ದರ ಏರಿಕೆ ಸರ್ಕಾರದಿಂದ ಚಿಂತನೆ

ಬೆಲೆ ಏರಿಕೆ ಇಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಮತ್ತೆ ಶಾಕ್‌ ಎದುರಾಗಿದೆ. ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಏರಿಕೆ ಮಾಡುವ ಕುರಿತು ಚರ್ಚೆ ತೀವ್ರಗೊಂಡಿದೆ. ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಿದೆ.

ವಿಆರ್‌ʼಎಲ್‌ ಸಂಸ್ಥೆಗೆ ಸುವರ್ಣ ಸಂಭ್ರಮ

ವಿಆರ್‌ʼಎಲ್‌ ಸಂಸ್ಥೆಗೆ ಸುವರ್ಣ ಸಂಭ್ರಮ

ಕನಸು, ಪರಿಶ್ರಮ, ನಂಬಿಕೆ, ಸವಾಲುಗಳನ್ನು ಮೆಟ್ಟಿ ನಿಂತು ಐದು ದಶಕಗಳ ಯಶಸ್ವಿ ಸೇವೆಯನ್ನು ಪೂರೈಸಿದ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನ ಸುವರ್ಣ ಮಹೋತ್ಸವ ಸಮಾರಂಭ ಮೈಸೂರಿನಲ್ಲಿ ಸಂಭ್ರಮದಿಂದ ಜರುಗಿತು. ಸಂಸ್ಥೆಗೆ ಸುವರ್ಣ ಮಹೋತ್ಸವದ ಜತೆಗೆ ನಗರದ ಬನ್ನಿಮಂಟಪ ಬಡಾವಣೆಯ ಜೋಡಿ ತೆಂಗಿನಮರ ರಸ್ತೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಆರ್‌ಎಲ್(VRL) ಕಟ್ಟಡ, ಬೃಹತ್ ಗೋದಾಮು ಕಟ್ಟಡ ಲೋಕಾರ್ಪಣೆ ಸಹ ಇದೇ ವೇಳೆ ನೆರವೇರಿಸಲಾಯಿತು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 1350 ಕೋಟಿ ರು. ಅಗತ್ಯ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 1350 ಕೋಟಿ ರು. ಅಗತ್ಯ

ಕೊಪ್ಪಳ ಜಿಲ್ಲೆಯ ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟ(Anjanadri Hill)ದ ದೇವಸ್ಥಾನ ಪ್ರದೇಶದ ಸಮಗ್ರ ಅಭಿವೃದ್ಧಿಗೆ 1350 ಕೋಟಿ ರು.ಗಳ ಅಗತ್ಯವಿದ್ದು, ವಿಶೇಷ ಅನುದಾನ ಮಂಜೂರಿಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್(Tourism Minister K.J. George) ತಿಳಿಸಿದ್ದಾರೆ.

Japanese industrial township: 7000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗ: ಜಪಾನ್ ಕೈಗಾರಿಕಾ ಟೌನ್‌ಶಿಪ್‌ಗೆ 300 ಎಕರೆ: ಎಂ.ಬಿ.ಪಾಟೀಲ

7000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗ

ತುಮಕೂರನ್ನು ಬೆಂಗಳೂರಿನ ನಂತರದ ಕೈಗಾರಿಕಾ ತಯಾರಿಕೆಯ ನಗರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿ 1736 ಎಕರೆಯನ್ನು ಮೀಸಲಿ ಟ್ಟಿದ್ದು, ಇದರಿಂದ 7 ಸಾವಿರ ಕೋಟಿ ರುಪಾಯಿ ಹೂಡಿಕೆ ಹರಿದು ಬರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರತಿಪಕ್ಷ ಪಟ್ಟು: ಭ್ರಷ್ಟ ಸಚಿವರಿಂದ ಉತ್ತರ ಪಡೆಯುವ ಅಗತ್ಯವಿಲ್ಲ

ಭ್ರಷ್ಟ ಸಚಿವರಿಂದ ಉತ್ತರ ಪಡೆಯುವ ಅಗತ್ಯವಿಲ್ಲ

ಸದನ ನಡೆಯುತ್ತಿರುವಾಗಲೇ ನಾಗೇಂದ್ರ ಅವರ ರಾಜೀನಾಮೆಯನ್ನು ಈ ಹಿಂದೆ ಪಡೆಯಲಾಗಿತ್ತು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿ ಕೊಂಡಿದ್ದೀರಿ. ಇದು ಸರಿಯಲ್ಲ. ಇದು ಸದನಕ್ಕೆ ಮಾಡಿದ ಅವಮಾನ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲದಿದ್ದರೆ ಸದನದ ಕಲಾಪಗಳನ್ನು ನಡೆಸಲು ಬಿಡುವುದಿಲ್ಲ ಎಂದು ಜೆಡಿಎಸ್-ಬಿಜೆಪಿ ನಾಯಕರು ಒಂದಾಗಿ ಉಭಯ ಸದನಗಳಲ್ಲೂ ಆಕ್ರೋಶ ವ್ಯಕ್ತಪಡಿಸಿದರು

ಉಭಯ ಸದನದಲ್ಲಿ ಕೋಲಾಹಲ

ಉಭಯ ಸದನದಲ್ಲಿ ಕೋಲಾಹಲ

ಹನೂರು ಭಾಗದಲ್ಲಿ ನಡೆದಿರುವ ಎನ್‌ಕೌಂಟರ್ ಉಭಯ ಸದನದಲ್ಲಿ ಸದ್ದು ಮಾಡಿದ್ದು, ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಪ್ರತಿಪಕ್ಷಗಳು ಆಗ್ರಹಿಸಿವೆ. ಸೋಮವಾರ ಸದನ ಆರಂಭವಾಗುತ್ತಿದ್ದಂತೆ ವಿಧಾನಪರಿಷತ್ ನಲ್ಲಿ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನಸಭೆ ಯಲ್ಲಿ ಆರ್.ಅಶೋಕ್ ವಿಷಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Bengaluru News: ಮಲಗಿದಲ್ಲೇ ಶವವಾದ ಟೆಕ್ಕಿ, 5 ವರ್ಷದ ಪುತ್ರ; ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ನಿಗೂಢ ಸಾವು

ಚಿಕ್ಕಬಾಣಾವರದಲ್ಲಿ ಟೆಕ್ಕಿ-ಪುತ್ರನ ಅನುಮಾನಾಸ್ಪದ ಸಾವು

ಬೆಂಗಳೂರಿನ ಚಿಕ್ಕಬಾಣಾವರದ ಗುಡ್ಡೆ ಬಸವಪುರದಲ್ಲಿ ಖಾಸಗಿ ಕಂಪನಿ ಉದ್ಯೋಗಿ ಅಭಿನಂದನ್ ಮತ್ತು ಅವರ 5 ವರ್ಷದ ಪುತ್ರ ಯದುವೀರ್ ಮನೆಯಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರ ತಾಯಿ ಕೊಲೆಯ ಸಂದೇಹ ವ್ಯಕ್ತಪಡಿಸಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಗಳು, ಮೊಬೈಲ್ ಕರೆ ವಿವರಗಳು ಹಾಗೂ ಕುಟುಂಬಸ್ಥರ ವಿಚಾರಣೆ ಸೇರಿ ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ಎರಡೂವರೆ ಕಿಲೋ ಮೀಟರ್‌ ಕ್ಯೂ ನಿಂತು ಮುಗಿಬಿದ್ದು ಖರೀದಿಸಿದ ಜೆನ್‌ ಝೀಗಳು; ಒಂದೇ ದಿನ 35 ಲಕ್ಷ ರುಪಾಯಿ ವಹಿವಾಟು!

ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ದಾಖಲೆಯ ವಹಿವಾಟು

HD Kumaraswamy: ಎಚ್ಎಂಟಿ ಕೈಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಎಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Loading...