ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಜೀನಿ ಮಾಲೀಕನ ವಿರುದ್ಧ ಲೈಂಗಿಕ ಕಿರುಕುಳ ದೂರು; ಆರೋಪ ನಿರಾಕರಿಸಿದ ದಿಲೀಪ್‌ ಕುಮಾರ್

ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಜೀನಿ ಸಂಸ್ಥೆ ಮಾಲೀಕ

Physical abuse: ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್‌ಕುಮಾರ್ ಅವರು, ತಾನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜನಪ್ರಿಯತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನನಗೆ ತೊಂದರೆ ನೀಡಿ, ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವರು ಯತ್ನಿಸುತ್ತಿರುತ್ತಾರೆ ಎಂದು ಆರೋಪಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್‌; ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

ಏ.27ರವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆಯಾರ್ಭಟ

Karnataka Weather: ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಉತ್ತರ ಒಳನಾಡಿನಲ್ಲಿ 2-4 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಲಿದೆ. ಮುಂದಿನ 3 ದಿನಗಳವರೆಗೆ ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tumkur News: ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

ದೇಶವೇ ಶೋಕಾಚರಣೆಯಲ್ಲಿರುವಾಗ ಸಿಪಿಐಗೆ ಅದ್ಧೂರಿ ಬೀಳ್ಕೊಡುಗೆ!

Tumkur News: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರು ಉಗ್ರರ ದಾಳಿಯಲ್ಲಿ ಮೃತಪಟ್ಟು ಇಡೀ ದೇಶ ಶೋಕಚರಣೆಯಲ್ಲಿರುವಾಗ, ತುಮಕೂರಿನಿಂದ ವರ್ಗಾವಣೆಯಾಗಿರುವ ಸಿಪಿಐ ಗೆ ತೆರೆದ ಜೀಪಿನಲ್ಲಿ ರೋಡ್ ಶೋ ಮಾಡಿ, ಅದ್ಧೂರಿಯಾಗಿ ಬೀಳ್ಕೊಡುಗೆ ಆಚರಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Rahul Gandhi:  ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೇ ಕಾಶ್ಮೀರದಲ್ಲಿ ದಾಳಿ ; ಪೋಸ್ಟ್ ಮಾಡಿದ ಕರ್ನಾಟಕ ಬಿಜೆಪಿ ಐಟಿ ಸೆಲ್​​ ವಿರುದ್ಧ ಕೇಸ್

ರಾಹುಲ್‌ ಗಾಂಧಿಗೂ, ಪಹಲ್ಗಾಮ್‌ ದಾಳಿಗೂ ಲಿಂಕ್‌; ಬಿಜೆಪಿ ಮೇಲೆ ಎಫ್‌ಐಆರ್‌

ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

DK Shivakumar: ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ಸರ್ಕಾರ ಬದ್ಧ: ಡಿಕೆಶಿ

DK Shivakumar: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ

ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆ

Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

Male Mahadeshwara Hills: ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Male Mahadeshwara Hills: ಇಲ್ಲಿಯವರೆಗೂ ಮಹದೇಶ್ವರ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Pahalgam Terror Attack: ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಪ್ರಲ್ಹಾದ್‌ ಜೋಶಿ

ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಜೋಶಿ

Pahalgam Terror Attack: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಇತಿಶ್ರೀ ಹಾಡಲು ಸಂಕಲ್ಪ ತೊಟ್ಟಿದೆ. ಪಹಲ್ಗಾಮ್‌ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಮಾಯಕರನ್ನು ಬಲಿ ಪಡೆದಿರುವ ಪಾಕ್‌ ಉಗ್ರರನ್ನು ಸೆದೆ ಬಡಿಯುತ್ತದೆ. ದುಷ್ಕೃತ್ಯವೆಸಗಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಎನ್ನುವಂತೆ ರಾಜತಾಂತ್ರಿಕವಾಗಿ 5 ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Cabinet meeting: ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ; 3647 ಕೋಟಿ ರೂ. ಕಾಮಗಾರಿಗಳಿಗೆ ಸಂಪುಟ ಒಪ್ಪಿಗೆ

ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ನೀಡಲು ಸಂಪುಟ ಒಪ್ಪಿಗೆ

Cabinet meeting: ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ ವಿಕೇಂದ್ರೀಕೃತ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳಲು ಉದ್ದೇಶಿಸಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Cabinet meeting: ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಬೇಕು; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಉಗ್ರರ ದಾಳಿ ಕುರಿತು ಕ್ಯಾಬಿನೆಟ್‌ ಸಭೆಯಲ್ಲಿ ಖಂಡನಾ ನಿರ್ಣಯ

Cabinet meeting: ಉಗ್ರರ ದಾಳಿ ಕುರಿತು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

Pahalgam terror attack: ಉಗ್ರರ ದಾಳಿ; ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ ತಲಾ 1 ಲಕ್ಷ ಪರಿಹಾರ

ಮೃತ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯ ಮಠದಿಂದ 1 ಲಕ್ಷ ಪರಿಹಾರ

Pahalgam terror attack: ಉಗ್ರರ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್ ರಾವ್, ಭರತ್ ಭೂಷಣ್ ಹಾಗೂ ಆಂಧ್ರ ಮೂಲದ ಬೆಂಗಳೂರು ನಿವಾಸಿ ಮಧುಸೂಧನ್ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಪರಿಹಾರ ಘೋಷಿಸಿದ್ದಾರೆ.

Rahul gandhi: ರಾಹುಲ್‌ ಗಾಂಧಿ ಕುರಿತು ಅವಹೇಳನಕಾರಿ ಪೋಸ್ಟ್‌; ರಾಜ್ಯ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

ರಾಹುಲ್‌ ಗಾಂಧಿ ವಿರುದ್ಧ ಪೋಸ್ಟ್; ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

Rahul gandhi: ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗ ಉಗ್ರರ ದಾಳಿ ನಡೆಯುತ್ತದೆ. ಪ್ರತಿ ಬಾರಿ ವಿದೇಶಕ್ಕೆ ಹೋದಾಗ ಈ ರೀತಿಯ ಕೃತ್ಯ ನಡೆದಿರುತ್ತದೆ ಎಂದು ಬಿಜೆಪಿ ಅವಹೇಳನ ಮಾಡಿದೆ ಎಂದು ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

CM Siddaramaiah: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸೂಚನೆ

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

CM Siddaramaiah: ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ, ಪಕ್ಷ ಕೊಡುತ್ತದೆ ಎಂದು ತಿಳಿಸಿದ್ದಾರೆ.

Suthradhari Movie: ಸಿನಿಮಾ ಬಿಡುಗಡೆಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ʼಸೂತ್ರಧಾರಿʼ ಚಿತ್ರತಂಡ

ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ ʼಸೂತ್ರಧಾರಿʼ ಚಿತ್ರತಂಡ

Suthradhari Movie: ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ʼಸೂತ್ರಧಾರಿʼ ಚಿತ್ರ ಮೇ 9 ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ನಿರ್ಮಾಪಕ ನವರಸನ್, ನಿರ್ದೇಶಕ ಕಿರಣ್ ಕುಮಾರ್, ನಾಯಕ ಚಂದನ್ ಶೆಟ್ಟಿ ಹಾಗೂ ನಾಯಕಿ ಅಪೂರ್ವ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಆಟಿಸಂ ಮಕ್ಕಳಿಗೆ ಆಕ್ಯುಪೇಶನಲ್ ಮತ್ತು ಸ್ಪೀಚ್ ಥೆರಪಿ ಕೇಂದ್ರ ಉದ್ಘಾಟಿಸಿದ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್

ಆಟಿಸಂ ಮಕ್ಕಳಿಗೆ ಆಕ್ಯುಪೇಶನಲ್ ಮತ್ತು ಸ್ಪೀಚ್ ಥೆರಪಿ ಕೇಂದ್ರ ಉದ್ಘಾಟನೆ

ಆಕ್ಯುಪೇಶನಲ್ ಮತ್ತು ಸ್ಪೀಚ್ ಥೆರಪಿ ಕೇಂದ್ರವನ್ನು ಸರ್ಕಾರಿ ಆಯುರ್ವೇದ ವೈದ್ಯಕೀಯ ಆಸ್ಪತ್ರೆ ಆವರಣ, ಧನ್ವಂತ್ರಿ ರಸ್ತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಈ ಕೇಂದ್ರವು ಬೆಂಗಳೂರು ಇಂಡಸ್ಟ್ರಿಯಲ್ ಟೌನ್ ಲಯನ್ಸ್ ಸರ್ವೀಸ್ ಫೌಂಡೇಶನ್ ಮತ್ತು ಬಿಜಯಾ ದೇವಿ ಚೋರಾರಿಯಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಿಂದ ಸ್ಥಾಪಿಸಲಾಗಿದೆ

Car Accident: ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; 2 ವರ್ಷದ ಮಗು ಸೇರಿ ಮೂವರ ದುರ್ಮರಣ

ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; ಮೂವರ ದುರ್ಮರಣ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ಅಪಘಾತ ನಡೆದಿದೆ. ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

Harassment: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ ಪೊಲೀಸ್‌ ವಶಕ್ಕೆ

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ ಪೊಲೀಸ್‌ ವಶಕ್ಕೆ

ಆರೋಪಿ ಕಂಡಕ್ಟರ್ ಪ್ರದೀಪ್‌ನನ್ನು ಅಮಾನತುಗೊಳಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸ್ ತನಿಖೆಗೆ ಒಪ್ಪಿಸಲಾಗಿದೆ. ಸಾರ್ವಜನಿಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮಹಿಳೆಯರ ಸುರಕ್ಷತೆಗಾಗಿ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಸ್ಥಾಪನೆ ಮತ್ತು ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

RCB vs RR: ಇಂದು ಮಧ್ಯಾಹ್ನ 3 ಗಂಟೆಯಿಂದ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿರ್ಬಂಧ

ಇಂದು ಮಧ್ಯಾಹ್ನ 3 ಗಂಟೆಯಿಂದ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬದಲಾವಣೆ

Bengaluru Traffic Advisory: ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Pahalgam Terror Attack: ಜೀವದ ಹಂಗು ತೊರೆದು ಶಿವಮೊಗ್ಗದ ಮಂಜುನಾಥ್‌ ಪುತ್ರನ ರಕ್ಷಿಸಿದ ಕಾಶ್ಮೀರಿ ಯುವಕನ ವಿಡಿಯೋ ಈಗ ವೈರಲ್‌

ಜೀವದ ಹಂಗು ತೊರೆದು ಬಾಲಕನ ರಕ್ಷಿಸಿದ ಕಾಶ್ಮೀರಿ ಯುವಕನ ವಿಡಿಯೋ ಈಗ ವೈರಲ್‌

ಭಯೋತ್ಪಾದಕರ ಕೈಯಿಂದ ಬದುಕುಳಿದ ಮಂಜುನಾಥ್ ಅವರ ಪುತ್ರ ಅಭಿಜಯ್‌ನನ್ನು ಸ್ಥಳೀಯ ವ್ಯಕ್ತಿಯೊಬ್ಬರು ಬೆನ್ನ ಮೇಲೆ ಹೊತ್ತುಕೊಂಡು ಓಡುತ್ತಾ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದರು. ಇದರ ವಿಡಿಯೋ ಇದೀಗ ವೈರಲ್ ಆಗಿದ್ದು "ಇದು ನಿಜವಾದ ಕಾಶ್ಮೀರ" ಎಂದು ಕೊಂಡಾಡಲಾಗುತ್ತಿದೆ.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 24th April 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಇಳಿಕೆ ಕಂಡು ಬಂದಿದ್ದು, 9,005ರೂ. ಇದ್ದು, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಇಳಿಕೆ ಆಗಿ ಪ್ರಸ್ತುತ 9,824 ರೂ. ಇದೆ.

ಜಸ್ಟೀಸ್ ಡಾ.ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಾರಂಭ

ಜಸ್ಟೀಸ್ ಡಾ.ಶಿವರಾಜ್ ಪಾಟೀಲರಿಗೆ ಅಭಿನಂದನಾ ಸಮಾರಂಭ

ಈಗಿರುವುದು ಸಣ್ಣ ಸಣ್ಣ ಅಪರಾಧಗಳಿಗೆ ಶಿಕ್ಷಿಸುವ ಕಾನೂನು ಗಳಾಗಿವೆ. ಹೀಗಾಗಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಳಗೊಂಡಂತೆ ದೊಡ್ಡ ವ್ಯಕ್ತಿಗಳಿಗೆ ಕಾನೂನಿನ ಮೂಲಕ ಬಿಸಿ ಮುಟ್ಟಿಸಿ ಸರ್ಕಾರ, ಸಮಾಜಕ್ಕೆ ವಿಶೇಷ ಸಂದೇಶ ರವಾನಿಸಬೇಕಾಗಿದೆ. ಇದಕ್ಕಾಗಿ ನ್ಯಾಯಾಂಗ ಕ್ಷೇತ್ರದ ಗಣ್ಯರು ಸೂಕ್ತ ಮಾರ್ಗದರ್ಶನ ಮಾಡಬೇಕು

CM Siddaramaiah: ಉಗ್ರರನ್ನು ಸದೆಬಡಿಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ: ಸಿಎಂ ಸಿದ್ದರಾಮಯ್ಯ

ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ಸಂಪೂರ್ಣ ಬೆಂಬಲ: ಸಿಎಂ ಸಿದ್ದರಾಮಯ್ಯ

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿದ್ದು, ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಕರ್ನಾಟಕ ಪಂಚಾಯತ್ ಐಕಾನ್ ಪುರಸ್ಕಾರಕ್ಕೆ ಗಂಗಾಧರ್ ಆಯ್ಕೆ

ಕರ್ನಾಟಕ ಪಂಚಾಯತ್ ಐಕಾನ್ ಪುರಸ್ಕಾರಕ್ಕೆ ಗಂಗಾಧರ್ ಆಯ್ಕೆ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಲ್ಲಿಸಿ ರುವ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಪ್ರೆಸ್ ಕ್ಲಬ್ ಕೊಡಮಾಡುವ ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿಗೆ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರ್ ನಾಯಕ್ ಆಯ್ಕೆಯಾಗಿದ್ದಾರೆ.

Pahalgam Terror Attack: ಪಹಲ್ಗಾಮ್‌ನಲ್ಲಿ ಉಗ್ರರಿಂದ ಮೃತಪಟ್ಟ ಭರತ್‌ ಭೂಷಣ್‌ ಅಂತಿಮ ದರ್ಶನ ಮಾಡಿದ ಸಿಎಂ

ಉಗ್ರರಿಂದ ಮೃತಪಟ್ಟ ಭರತ್‌ ಭೂಷಣ್‌ ಅಂತಿಮ ದರ್ಶನ ಮಾಡಿದ ಸಿಎಂ

Pahalgam Terror Attack: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಇತರ ಗಣ್ಯರೂ ಅಂತಿಮ ದರ್ಶನ ಕೈಗೊಳ್ಳಲಿರುವ ನಿರೀಕ್ಷೆ ಇದ್ದು, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.