ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಂಗಳೂರಿಗೆ ವಿಸ್ತರಣೆ
Bengaluru-Madgaon Vande Bharat Express: ಹೆಚ್ಚುತ್ತಿರುವ ಪ್ರಯಾಣಿಕರ ಸಂದಣಿ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಹಾಸನ, ಮಂಗಳೂರು, ಉಡುಪಿ ಮತ್ತು ಕಾರವಾರದ ಮೂಲಕ ಬೆಂಗಳೂರು ಹಾಗೂ ಮಡಗಾಂವ್‌ಗಳನ್ನು ಸಂಪರ್ಕಿಸುವ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸಂಪರ್ಕ ಕಲ್ಪಿಸಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದನೆ ದೊರೆತಿದೆ.