ಹುಲಿಗಳ ಸಾವು, ಕರ್ತವ್ಯ ಲೋಪ ಎಸಗಿದ 3 ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ
Tigers Death: ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪ ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರಂತೆ ಅರಣ್ಯ ಇಲಾಖೆಯು ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಮತ್ತು ವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದೆ.