ಮತಗಳ್ಳತನ ವಿರುದ್ಧ ರಾಜ್ಯದಲ್ಲಿ 1,12,40,000 ಸಹಿ ಸಂಗ್ರಹ: ಡಿಕೆಶಿ
DK Shivakumar Statement: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಹಾಗೂ ನಮ್ಮ ಪಕ್ಷ ರಾಜಕೀಯವಾಗಿ ವಿಭಾಗಿಸಿಕೊಂಡಿರುವ 40 ಜಿಲ್ಲೆಗಳಿಂದ ಸಹಿ ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಬಹಳ ಪ್ರಾಮಾಣಿಕವಾಗಿ ಈ ಅಭಿಯಾನದಲ್ಲಿ ಕೆಲಸ ಮಾಡಿದ್ದಾರೆ. 8-10 ಕಡೆ ಹೊರತು ಪಡಿಸಿ, ಉಳಿದ ಎಲ್ಲಾ ಕಡೆಗಳಲ್ಲಿ ಚೆನ್ನಾಗಿ ಸಹಿ ಸಂಗ್ರಹಿಸಲಾಗಿದೆ. ಬೂತ್ ವಾರು ಸಹಿ ಸಂಗ್ರಹಿಸಲಾಗಿದ್ದು, ಜನರಲ್ಲಿ ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಈ ಸಹಿ ಸಂಗ್ರಹದ ಅರ್ಜಿಗಳನ್ನು ಇದೇ ತಿಂಗಳು 10ರಂದು ದೆಹಲಿಗೆ ರವಾನಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.