ನಟ ದರ್ಶನ್ರಿಂದ ಸಹಕೈದಿಗಳಿಗೆ ಕಿರುಕುಳ, ಒದೆತ: ಆರೋಪ
ದರ್ಶನ್ ಜೊತೆ ಒಂದೇ ಸೆಲ್ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ (Renuka swamy murder case) ಜೈಲು ಸೇರಿದವರೇ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಕೆಲ ದಿನದ ಹಿಂದೆ ದರ್ಶನ್ ಸೆಲ್ನಲ್ಲಿ ದೊಡ್ಡ ಜಗಳ ನಡೆದು ಹೋಗಿದೆಯಂತೆ.