ಶಾಸಕರ ಕರೆ ಸ್ವೀಕರಿಸದ ಅಧಿಕಾರಿ ಅಮಾನತು
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯ ಕ್ರಮಗಳ ಬಗ್ಗೆ ಮಾತನಾಡಲು ಬಿಂದುಮಣಿ ಅವರಿಗೆ ಶಾಸಕರು ಮೂರು ದಿನ ಕರೆ ಮಾಡಿದ್ದಾರೆ. ಆದರೆ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಬಿಂದುಮಣಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಇಲಾಖೆಯನ್ನು ಕೋರಿದ್ದರು.