ಉಡುಪಿಯಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್
Laxmi Hebbalkar: ಉಡುಪಿ ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.