ಮಾಗಡಿ ಶ್ರೀನಿವಾಸ ಕಲ್ಯಾಣದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಭಾಗಿ
ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.