ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್ಗೆ ಬಿದ್ದು 2 ವರ್ಷದ ಮಗು ಸಾವು
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಸಂಪ್ಗೆ ಬಿದ್ದು ಮೃತಪಟ್ಟಿದೆ. ಗ್ರಾಮದ ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ಮೃತಪಟ್ಟಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.