ಏಪ್ರಿಲ್ 9ಕ್ಕೆ ಉಪಚುನಾವಣೆ; ಸರ್ಕಾರಿ ನೌಕರರಿಗೆ ರಜೆ ಘೋಷಣೆ
ಏಪ್ರಿಲ್ 9ರ ಗುರುವಾರದಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.