ಎಸ್‌ಸಿ ಒಳಮೀಸಲಾತಿ ಮಸೂದೆಯನ್ನು ವಾಪಸ್ ಕಳುಹಿಸಿದ ಗವರ್ನರ್
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ರಾಜ್ಯ ಸರ್ಕಾರವು ಎಸ್‌ಸಿ ಒಳಮೀಸಲಾತಿ ಮಸೂದೆ (ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ 2025) ಮಂಡಿಸಿ ಅಂಗೀಕಾರ ಪಡೆದಿತ್ತು. ಆದರೆ, ಇದೀಗ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ.