ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ರಾಜಕಾರಣ ಪಕ್ಕಕ್ಕಿಟ್ಟು, ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕೋಣ: ಡಿ.ಕೆ. ಶಿವಕುಮಾರ್

ರಾಜ್ಯದ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒತ್ತಡ ಹಾಕೋಣ: ಡಿಕೆಶಿ

DK Shivakumar: ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಲ್ಲ. ಪಾಪ, ಬೊಮ್ಮಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಯಿ ಅವರೇ, ನಿರ್ಮಲಾ ಸೀತಾರಾಮನ್ ಹಾಗೂ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

KUWJ Annual Awards: ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ; ಜ.20 ಕೊನೆಯ ದಿನಾಂಕ

ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿಗೆ 2024 ಜನವರಿ 1 ರಿಂದ 2024 ಡಿಸೆಂಬರ್ 31 ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸುವುದು ಸೇರಿ ವಿವಿಧ ಷರತ್ತುಗಳನ್ನು ವಿಧಿಸಲಾಗಿದೆ. ಪ್ರಶಸ್ತಿಗಳ ಕುರಿತ ವಿವರ ಇಲ್ಲಿ ನೀಡಲಾಗಿದೆ.

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; ಹಿರಿಯ ಅಧಿಕಾರಿಗಳ ದೌಡು

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ

ಕಲಬುರಗಿ ಸೆಂಟ್ರಲ್‌ ಜೈಲಿನಲ್ಲಿ ಬೆಂಗಳೂರು ಮೂಲದ ಕೈದಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪ ಕೇಳಿಬಂದಿದ್ದು, ಇದಕ್ಕೆ ಪ್ರತಿಯಾಗಿ ಸ್ಥಳೀಯ ಕೈದಿಗಳೂ ಅವಾಚ್ಯ ಪದಗಳಿಂದ ಉತ್ತರಿಸಿದ್ದಾರೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ರೊಚ್ಚಿಗೆದ್ದ ಸ್ಥಳೀಯ ಕೈದಿಗಳು, ಬೆಂಗಳೂರಿನ ಕೈದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿ ಬಿಡುಗಡೆಗೊಳಿಸಿದ ಮಾಜಿ ಸಚಿವ ವೆಂಕಟರಮಣಪ್ಪ

ಪಾವಗಡದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್, ಡೈರಿ ಬಿಡುಗಡೆ

Pavagada News: ಪಾವಗಡ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಚಿವ ವೆಂಕಟರಮಣಪ್ಪ, ಅಧಿಕಾರದಲ್ಲಿರುವ ಸಮಯದಲ್ಲಿ ಜನರಿಗೆ ಶಾಶ್ವತವಾಗಿ ಉಪಯುಕ್ತವಾಗುವ ಕೆಲಸಗಳನ್ನು ಮಾಡಿದಾಗ ಮಾತ್ರ ನಿಜವಾದ ಸೇವಾ ತೃಪ್ತಿ ಸಿಗುತ್ತದೆ ಎಂದು ತಿಳಿಸಿದ್ದಾರೆ.

ಸಿಎಂ ಸುದೀರ್ಘ ಅವಧಿಯ ಅಧಿಕಾರದ ಕೊಡುಗೆಯಾಗಿ ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಲಿ: ಬೊಮ್ಮಾಯಿ

ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಘೋಷಿಸಲಿ: ಬೊಮ್ಮಾಯಿ

Basavaraj Bommai: ಹಾವೇರಿಯ ದೇವಗಿರಿ - ಯಲ್ಲಾಪುರ ಬಳಿ ನೂತನವಾಗಿ ನಿರ್ಮಿಸಲಾದ ಹಾವೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಸುದೀರ್ಘ ಅವಧಿಯ ಅಧಿಕಾರದ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ದಾಖಲೆಯ ನೆನಪಿಗಾಗಿ ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸತ್ರೆ ಕೊಡುಗೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿದ್ದರಾಮಯ್ಯ ಭರವಸೆ

ಹಾವೇರಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

CM Siddaramaiah: ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಹಾವೇರಿ, ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ; ಕಮಿಷನರ್‌ ಸ್ಪಷ್ಟನೆ ಏನು?

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರಿಂದ ಹಲ್ಲೆ

ಹುಬ್ಬಳ್ಳಿಯಲ್ಲಿ ಗಲಾಟೆ ಪ್ರಕರಣದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ಬಂಧಿಸಲು ಪೊಲೀಸರು ತೆರಳಿದಾಗ ಹೈಡ್ರಾಮಾ ನಡೆದಿದೆ. ಪೊಲೀಸರು ಆಕೆಯನ್ನು ಬಂಧಿಸಿ ಕರೆದೊಯ್ಯುವ ವೇಳೆ, ತನ್ನ ಬಟ್ಟೆ ಬಿಚ್ಚಿ ಥಳಿಸಿದ್ದಾರೆಂದು ಕಾರ್ಯಕರ್ತೆ ಆರೋಪಿಸಿದ್ದಾರೆ. ಘಟನೆಯ ವಿಡಿಯೋ ವೈರಲ್‌ ಆಗಿದೆ.

ದೀರ್ಘಾವಧಿ ಸಿಎಂ ದಾಖಲೆ ಹೊತ್ತಿನಲ್ಲೇ ವಿದಾಯದ ಮಾತುಗಳನ್ನಾಡಿದ ಸಿಎಂ ಸಿದ್ದರಾಮಯ್ಯ!

ದೀರ್ಘಾವಧಿ ಸಿಎಂ ದಾಖಲೆ ಹೊತ್ತಲ್ಲೇ ವಿದಾಯದ ಮಾತುಗಳನ್ನಾಡಿದ ಸಿಎಂ!

ರಾಜಕಾರಣ ತೃಪ್ತಿಕೊಟ್ಟಿದೆ. ಜನರಿಗಾಗಿ ಕೆಲಸ ಮಾಡುವುದೇ ಖುಷಿ. ಪೂರ್ಣಾವಧಿ ಮುಖ್ಯಮಂತ್ರಿ ಆಗುವ ವಿಶ್ವಾಸವಿದ್ದು, ಎಲ್ಲವೂ ಹೈಕಮಾಂಡ್ ತೀರ್ಮಾನವನ್ನು ಅವಲಂಬಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ನೆನ್ನೆ ಹೇಳಿದ್ದರು. ಇದರ ಬೆನ್ನಲ್ಲೇ ಈಗ ರಾಜಕೀಯ ವಿದಾಯದ ಬಗ್ಗೆ ಅವರು ಮಾತನಾಡಿದ್ದಾರೆ.

ವಿದೇಶದಲ್ಲಿ ಎಂಜಿನಿಯರಿಂಗ್ ಮುಗಿಸಿ ಬಂದಿದ್ದ ಬೆಂಗಳೂರಿನ ಯುವಕ 16ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಬೆಂಗಳೂರಿನಲ್ಲಿ 16ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Student suicide in Bengaluru: ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದೆ. ಮಂಗಳೂರು ಮೂಲದ 26 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದೇಶದಲ್ಲಿ ಎಂಜಿನಿಯರಿಂಗ್ ಮುಗಿಸಿ ವಾಪಸ್ ಆದ ಬೆನ್ನಲ್ಲೇ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಜ.18ರಿಂದ ತುಮಕೂರಿನ ವಿವಿಧ ಬಡಾವಣೆಗಳಲ್ಲಿ ಹಿಂದೂ ಸಮಾಜೋತ್ಸವ ಆಚರಣೆ: ಸಿದ್ದಲಿಂಗ ಸ್ವಾಮೀಜಿ

ಜ.18ರಿಂದ ತುಮಕೂರಿನಲ್ಲಿ ಹಿಂದೂ ಸಮಾಜೋತ್ಸವ ಆಚರಣೆ

Tumkur News: ತುಮಕೂರು ನಗರದ ವಿವಿಧ ಬಡಾವಣೆಗಳಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಜ.18 ರಿಂದ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಸಮಿತಿಯ ಗೌರವಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಅವರು ತಿಳಿಸಿದ್ದಾರೆ.

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಕಾರ್ಮಿಕರ ಸಾವು, 6 ಮಂದಿಗೆ ಗಾಯ

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರ ಸಾವು

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Infosys land sale: ಉದ್ಯಮಕ್ಕೆ ಪಡೆದಿದ್ದ ಭೂಮಿ ಮಾರಾಟ; ಇನ್ಫೋಸಿಸ್‌ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಭೂಮಿ ಮಾರಾಟ; ಇನ್ಫೋಸಿಸ್‌ ವಿರುದ್ಧ ತನಿಖೆಗೆ ಸರ್ಕಾರ ಆದೇಶ

ಮತ್ತೊಂದೆಡೆ ಆರೋಪದ ಬಗ್ಗೆ ಸ್ಪಷ್ಟನೆ ನೀಡಿರುವ ಇನ್ಫೋಸಿಸ್‌ ಸಂಸ್ಥೆ, ನಿಯಮಗಳ ಪ್ರಕಾರವಾಗಿಯೇ ಭೂಮಿಯನ್ನು ಮಾರಾಟ ಮಾಡಲಾಗಿದೆ. ಇದು ಸರ್ಕಾರದಿಂದ ಹಂಚಿಕೆಯಾಗಿದ್ದ ಭೂಮಿಯಲ್ಲ. ಮಾರುಕಟ್ಟೆ ಮೌಲ್ಯದಲ್ಲಿ ವಾಣಿಜ್ಯೇತರ ಮತ್ತು ಕೈಗಾರಿಕೇತರ ಭೂಮಿಯನ್ನಾಗಿ ಖರೀದಿ ಮಾಡಲಾಗಿತ್ತು ಎಂದು ಹೇಳಿದೆ.

Kogilu Encroachment: ಕೋಗಿಲು ಸರ್ಕಾರಿ ಜಾಗ ಒತ್ತುವರಿ; ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

ಕೋಗಿಲು ಸರ್ಕಾರಿ ಜಾಗ ಒತ್ತುವರಿ; ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರಿನ ಹೊರವಲಯದ ಯಲಹಂಕದ ಕೋಗಿಲು ಗ್ರಾಮದ ಸರ್ವೆ ನಂಬರ್ 99ರಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ 14 ಎಕರೆ 36 ಗುಂಟೆ ಜಮೀನನ್ನು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆಗೆ ಹಸ್ತಾಂತರಿಸಲಾಗಿತ್ತು. ಆದರೆ, ಅಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿ 160ಕ್ಕೂ ಹೆಚ್ಚು ಮನೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು. ಈ ಮನೆಗಳನ್ನು ಇತ್ತೀಚೆಗೆ ತೆರವು ಮಾಡಲಾಗಿತ್ತು.

ಸ್ವಿಗ್ಗಿ ಡೆಲಿವರಿ ಪಾರ್ಟನರ್‌ಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಅಪರಾಧ ತಡೆಗಟ್ಟುವಿಕೆ ಜಾಗೃತಿ ತರಬೇತಿ ಆಯೋಜಿಸಿದ ಸ್ವಿಗ್ಗಿ

ಅಪರಾಧ ತಡೆಗಟ್ಟುವಿಕೆ ಜಾಗೃತಿ ತರಬೇತಿ ಆಯೋಜಿಸಿದ ಸ್ವಿಗ್ಗಿ

ತರಬೇತಿಯು ಅಪರಾಧ ಜಾಗೃತಿ ಮತ್ತು ರಸ್ತೆ ಸುರಕ್ಷತೆ ಮತ್ತು ಸಂಚಾರ ಜಾಗೃತಿಯ ಅಧಿ ವೇಶನ ಮತ್ತು ಆರ್ಥಿಕ ಸಾಕ್ಷರತೆಯ ಕುರಿತು ಕೇಂದ್ರೀಕೃತ ಅಧಿವೇಶನವನ್ನು ಒಳಗೊಂಡಿತ್ತು. ಅಪರಾಧ ಜಾಗೃತಿ ತರಬೇತಿ ಅವಧಿಯು ಸಮುದಾಯದ ಜಾಗರೂಕತೆ ಮತ್ತು ಸುರಕ್ಷತೆಯನ್ನು ಉತ್ತೇಜಿಸಲು ಸ್ವಿಗ್ಗಿಯ ವ್ಯಾಪಕ ವಿತರಣಾ ಪಾಲುದಾರರ ಜಾಲವನ್ನು ಬಳಸಿಕೊಳ್ಳುವ ಗುರಿಯನ್ನು ಹೊಂದಿತ್ತು

Ballari Firing: ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್‌ ವರ್ಗ

ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್‌ ಅವರು ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ- ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್‌ ಅವರನ್ನ ಸರ್ಕಾರ ವರ್ಗಾವಣೆಗೊಳಿಸಿದೆ.

Crime News: ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗಿಳಿಸಿದ ಪಾಪಿ ತಂದೆ, ಅಜ್ಜಿ ಸೇರಿ 12 ಮಂದಿ ಬಂಧನ

ಮಗಳನ್ನೇ ವೇಶ್ಯಾವಾಟಿಕೆಗಿಳಿಸಿದ ಪಾಪಿ ತಂದೆ, ಅಜ್ಜಿ ಸೇರಿ 12 ಮಂದಿ ಬಂಧನ

ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ದುರಾಸೆಯಿಂದ ಈ ತಂದೆ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ. ಆಕೆಯ ಅಜ್ಜಿ ಕೂಡ ಈ ಕೃತ್ಯಕ್ಕೆ ಸಹಕರಿಸಿದ್ದಾಳೆ. ಇವರಿಬ್ಬರೂ ಹಾಗೂ ಇವರಿಂದ ಬಾಲಕಿಯನ್ನು ಪಡೆದುಕೊಂಡ ಮಾಂಸ ದಂಧೆ ಕಿಂಗ್‌ಪಿನ್‌ ಸೇರಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿ ಕಂಬಿ ಹಿಂದೆ ತಳ್ಳಿದ್ದಾರೆ. ಈ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.

Car Fire Accident: ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಗುರುತು ಸಿಗದಂತೆ ಸುಟ್ಟು ಕರಕಲಾದ ಕಾರು, ಇಬ್ಬರ ಶವ ಪತ್ತೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಕಷ್ಟವಾಗಿದೆ.

ಭಾರತದ ಜೆನ್-ಜೀ ಪೀಳಿಗೆಯ ಪ್ರವಾಸ ಸಂಸ್ಕೃತಿಯನ್ನು ಸಂಗೀತೋತ್ಸವಗಳು ಹೇಗೆ ಬದಲಿಸುತ್ತಿವೆ ಎಂದು ಬಹಿರಂಗಗೊಳಿಸಿದ ಏರ್‌ಬಿಎನ್‌ಬಿ ವರದಿ

'ಅನುಭವ ಕೇಂದ್ರಿತ ಪ್ರವಾಸೋದ್ಯಮ ಒಳನೋಟಗಳು' ಎಂಬ ವರದಿ ಬಿಡುಗಡೆ

ಪ್ರತಿಷ್ಠಿತ ಏರ್‌ಬಿಎನ್‌ಬಿ ಸಂಸ್ಥೆಯು ತನ್ನ ಹೊಸ 'ಅನುಭವ ಕೇಂದ್ರಿತ ಪ್ರವಾಸೋದ್ಯಮ ಒಳನೋಟಗಳು' ಎಂಬ ವರದಿಯನ್ನು ಬಿಡುಗಡೆ ಮಾಡಿದ್ದು, ಈ ವರದಿಯು ಜೆನ್-ಜೀ ಪೀಳಿಗೆಯು ಲೈವ್ ಕಾನ್ಸರ್ಟ್‌ಗಳು ಮತ್ತು ಮ್ಯೂಸಿಕ್ ಫೆಸ್ಟಿವಲ್ ಗಳನ್ನು ಗಮನದಲ್ಲಿಟ್ಟು ಕೊಂಡು ತಮ್ಮ ಪ್ರವಾಸಗಳನ್ನು ಹೇಗೆ ಯೋಜಿಸುತ್ತಿದ್ದಾರೆ ಎಂದು ತಿಳಿಸಿದೆ.

ಅದೃಶ್ಯ ಅಪಾಯಗಳ ಹೆಚ್ಚಳ ಮತ್ತು ಆಧುನಿಕ ನೀರು ಶುದ್ದೀಕರಣ ಉಪಕರಣಗಳ ರಕ್ಷಣಾ ವ್ಯವಸ್ಥೆ

ಆಧುನಿಕ ನೀರು ಶುದ್ದೀಕರಣ ಉಪಕರಣಗಳ ರಕ್ಷಣಾ ವ್ಯವಸ್ಥೆ

ನೀರಿನ ಮಟ್ಟಗಳು ಕ್ಷೀಣಿಸುತ್ತಿದ್ದಂತೆ, ಜಲಚರಗಳು ಪೂರೈಕೆಗೆ ಆಳವಾದ ಭೂಜನಕ ಅಂಶ ಗಳನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತವೆ. ಈ ಮಾಲಿನ್ಯಕಾರಕಗಳು ನೀರಿನ ನೋಟವನ್ನು ಬದಲಾಯಿಸುವುದಿಲ್ಲ, ಅದಕ್ಕಾಗಿಯೇ ಮನೆಯ ಮಟ್ಟದಲ್ಲಿ ಅವುಗಳ ಅಪಾಯಗಳನ್ನು ಕಡಿಮೆ ಅಂದಾಜು ಮಾಡಲಾಗುತ್ತದೆ.

ಶೈಕ್ಷಣಿಕ ಕ್ರಾಂತಿಗೆ ಸಜ್ಜಾದ ಕಲ್ಯಾಣ ಕರ್ನಾಟಕ

ಶೈಕ್ಷಣಿಕ ಕ್ರಾಂತಿಗೆ ಸಜ್ಜಾದ ಕಲ್ಯಾಣ ಕರ್ನಾಟಕ

ಮೆಟ್ರೊ ನಗರಗಳಿಗೆ ಕೋಚಿಂಗ್ ಪಡೆಯಲು ಹೋಗುತ್ತಿರುವ ಸ್ಪರ್ಧಾರ್ಥಿಗಳು ದುಬಾರಿ ಜೀವನ ಶೈಲಿ, ಅಪರಿಚಿತ ಪರಿಸರ ಮತ್ತು ವಸತಿ ಸಮಸ್ಯೆಗಳು ಅನೇಕ ಪ್ರತಿಭಾವಂತರನ್ನು ಸ್ಪರ್ಧೆ ಯಿಂದ ಹಿಂದೆ ಸರಿಯುವಂತೆ ಮಾಡುತ್ತಿದ್ದವು. ಆದರೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ದೂರದೃಷ್ಟಿಯಿಂದಾಗಿ, ದೇಶದ ಖ್ಯಾತ ವಿಷಯ ತಜ್ಞರೇ ಕಲಬುರಗಿಗೆ ಬಂದು ಸ್ಥಳೀಯ ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ

Question Paper Leak: ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ, ಆದರೂ ಪರೀಕ್ಷೆ ನಡೆಸಿದ ಇಲಾಖೆ

ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ

ಮಂಗಳವಾರದ ಗಣಿತ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋಮವಾರ ವಾಟ್ಸ್ಯಾಪ್​ ಮೂಲಕ ವಿದ್ಯಾರ್ಥಿಗಳಿಗೆ ತಲುಪಿದೆ. 80 ಅಂಕಗಳಿಗೆ ಸಿದ್ಧಪಡಿಸಿದ್ದ ಗಣಿತ ಪ್ರಶ್ನೆ ಪತ್ರಿಕೆಯ 47 ಪ್ರಶ್ನೆಗಳು ಹೊಂದಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದರೂ ಅದೇ ಪ್ರಶ್ನೆ ಪತ್ರಿಕೆಗೆ ಮಂಗಳವಾರ PU ಪರೀಕ್ಷಾ ಮಂಡಳಿ ಪರೀಕ್ಷೆ ನಡೆಸಿದೆ. ಪರೀಕ್ಷಾ ಮಂಡಳಿಯ ಈ ನಡೆಗೆ ಆಕ್ರೋಶ ವ್ಯಕ್ತವಾಗುತ್ತಿದೆ.

Self Hraming: ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ

ಮದುವೆಯಾಗಲು ಒಪ್ಪದ ಯುವತಿ, ಪುರೋಹಿತ ಆತ್ಮಹತ್ಯೆ

ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.

Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇಂದು- ನಾಳೆ ಮಳೆ, ಬೆಂಗಳೂರು- ಒಳನಾಡು ಗಡಗಡ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಇಂದು- ನಾಳೆ ಮಳೆ, ಒಳನಾಡು ಗಡಗಡ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವದಿಂದಾಗಿ ನಾಳೆಯಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಇರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಇಳಿಕೆ ಆಗಲಿದೆ.

Self Harming: ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ನೀರಿನ ಸಂಪ್​ಗೆ ಬಿದ್ದು ಇಬ್ಬರು ಮಕ್ಕಳ ಜತೆ ತಾಯಿ ಆತ್ಮಹತ್ಯೆ, ಕಾರಣವೇನು?

ಸಿಂಗೋನಹಳ್ಳಿ ಗ್ರಾಮದಲ್ಲಿ ಮೃತ ವಿಜಯಲಕ್ಷ್ಮಿ ಕುಟುಂಬ ನೆಲಸಿತ್ತು. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಒಟ್ಟಿಗೆ ಜೀವನ ಮಾಡುತ್ತಿದ್ದರು. ಆದರೆ ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ವಿಜಯಲಕ್ಷ್ಮೀ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಮಕ್ಕಳನ್ನು ನೀರಿನ ಸಂಪ್​ಗೆ ತಳ್ಳಿ ಬಳಿಕ ತಾನೂ ಸಂಪ್​ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Loading...