ಸ್ಲೀಪರ್ ಬಸ್ ಬೆಂಕಿಗಾಹುತಿ: 17 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.