ಬೆಂಗಳೂರಿನಲ್ಲಿ ಇಂದು ಸಂಜೆ ಗುಡುಗು ಸಹಿತ ಬಿರುಗಾಳಿ ಮಳೆ ಸಾಧ್ಯತೆ
Karnataka Weather: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಭಾಗಗಳಿಗೆ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.