ರಾತ್ರಿ ಗಡಗಡ ಚಳಿ, ಹಗಲು ಚುರುಚುರು ಬಿಸಿಲು; ವಿಜಯಪುರದಲ್ಲಿ 7 ಡಿಗ್ರಿ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಜನರಿಗೆ ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ನೀರು ಬಳಸುವುದು ಹಾಗೂ ಮುಂಜಾನೆ ಮತ್ತು ಸಂಜೆ ವಾಕಿಂಗ್‌ಗೆ ತೆರಳದಂತೆ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ (Bengaluru weather) ಸಂಜೆ, ರಾತ್ರಿ ಹಾಗೂ ಮುಂಜಾನೆ ತಾಪಮಾನ ಎಂದಿಗಿಂತ ಕಡಿಮೆ ಪ್ರಮಾಣದಲ್ಲಿರಲಿದೆ. ಹಿರಿಯ ನಾಗರಿಕರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ.