ಚಿಕ್ಕಮಗಳೂರಿನಲ್ಲಿ ಸಾರಿಗೆ ಬಸ್ ಹರಿದು ಇಬ್ಬರು ಬೈಕ್ ಸವಾರರ ಸಾವು
ಕಡೂರಿನಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಇಬ್ಬರು ಸವಾರರು ರಸ್ತೆಯ ಮೇಲೆಯೇ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದು ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.