ಮಂಗಳೂರು- ಬೆಂಗಳೂರು ಹೆದ್ದಾರಿಯಲ್ಲಿ ಭೂ ಕುಸಿತ; ಸಂಚಾರ ಬಂದ್
ಕಳೆದೊಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂ ಕುಸಿತ ಸಂಭವಿಸಿದ್ದು, ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.