ಡಿ.7ರಂದು ಸೋರೆಕಾಯಿಪುರದಲ್ಲಿ ಮಲೆನಾಡು ಗಿಡ್ಡ ಹೋರಿ ಹಬ್ಬ
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆಯ ಸೋರೆಕಾಯಿಪುರದ ಮಲ್ಲಿಗಮ್ಮ ದೇವಸ್ಥಾನ ಆವರಣದಲ್ಲಿ ಡಿ.7ರಂದು 'ಮಲೆನಾಡು ಗಿಡ್ಡ ಹೋರಿ ಹಬ್ಬ' ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ 50 ರೈತರಿಗೆ ಉಚಿತವಾಗಿ ಮಲೆನಾಡು ಗಿಡ್ಡ ತಳಿಯ ಜೋಡಿ ಹೋರಿಗಳನ್ನು ನೀಡಲಾಗುತ್ತದೆ.