ರಾಜ್ಯದಲ್ಲಿ ಹಠಾತ್ ಸಾವು ʼಅಧಿಸೂಚಿತ ಕಾಯಿಲೆʼ ಎಂದು ಪರಿಗಣನೆ
Heart attacks: ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ನಾವು ನಿರ್ಧರಿಸಿದ್ದೇವೆ. ಆಸ್ಪತ್ರೆಗಳ ಹೊರಗೆ ಹಠಾತ್ ಸಾವು ಸಂಭವಿಸಿದರೆ, ಅದನ್ನು ಸರ್ಕಾರಕ್ಕೆ ತಿಳಿಸಬೇಕು. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.