ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಅಬ್ಬರಿಸುತ್ತಿದೆ. ಉಳಿದೆಡೆ ಒಣ ಹವಾಮಾನ ಇದ್ದು ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ. ಜೂನ್ 29 ರ ಬಳಿಕ ಮುಂಗಾರು ಚುರುಕಾಗಲಿದ್ದು, ಕರಾವಳಿ ಹಾಗೂ ಪಶ್ವಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆ ಜೋರಾಗಲಿದೆ.