ಒತ್ತುವರಿ ಮಾಡಿಲ್ಲ ಎಂದಾದರೆ ಏಕೆ ಗಾಬರಿಯಾಗಬೇಕು: ಡಿಕೆಶಿ ಪ್ರಶ್ನೆ
DK Shivakumar: ನಾನು ಹಾಗೂ ಸಿದ್ದರಾಮಯ್ಯ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತೂ ಇಲ್ಲ. ಯಾರೋ ಇದರ ಬಗ್ಗೆ ಪಿಐಎಲ್ ಹಾಕಿದ್ದಾರೆ. ಇದು ಬಹಳ ವರ್ಷದಿಂದ ನಡೆದಿದೆ. ಭೂ ಒತ್ತುವರಿ ಬಗ್ಗೆ ಸರಿಯಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ನ್ಯಾಯಲಯವು ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಇದರ ಬಗ್ಗೆ ನಾವು ಮಾಧ್ಯಮದಲ್ಲಿ ಓದಿದ್ದೇವೆ. ನ್ಯಾಯಾಲಯ ಕ್ರಮ ತೆಗೆದುಕೊಳ್ಳಲು ಗಡವು ನೀಡಿದ ಕಾರಣಕ್ಕೆ ಅಧಿಕಾರಿಗಳು ಹೋಗಿ ಅಳತೆ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.