ನಾಳೆಯಿಂದ ಗೃಹಲಕ್ಷ್ಮಿ 24ನೇ ಕಂತಿನ ಹಣ ಸಂದಾಯ: ಹೆಬ್ಬಾಳ್ಕರ್
Laxmi Hebbalkar: 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇನ್ನು ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಆಗುತ್ತಿರುವ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಈ ಬಗ್ಗೆ ಪರಿಶೀಲನೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.