ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ
ಇತ್ತೀಚೆಗಷ್ಟೆ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅದ್ಧೂರಿಯಾದ ಬ್ರಹ್ಮ ಕಲಶೋತ್ಸವ ಜರುಗಿತ್ತು. ಬ್ರಹ್ಮ ಕಲಶೋತ್ಸವದ ಬಳಿಕ ಇಲ್ಲಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಸಿನಿಮಾ ತಾರೆಯರು, ರಾಜಕೀಯ ನಾಯಕರು ಸೇರಿದಂತೆ ಅನೇಕರು ಮಾರಿಯಮ್ಮ ದೇಗುಲಕ್ಕೆ ಹಲವರು ಭೇಟಿ ನೀಡುತ್ತಿದ್ದಾರೆ. ಇದೀಗ ನಿರ್ಮಾಪಕಿ ಆಶ್ವಿನಿ ಪುನೀತ್ ಕಾಪು ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.