ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಆಟೋ ಡಿಕ್ಕಿಯಾಗಿ 6 ಮಂದಿ ದುರ್ಮರಣ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.