ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಬದುಕಿನ ಮಹಾ ಕೊಡುಗೆ: ಮೃತರಾದ ವೆಂಕಟೇಶ್ ಕುಟುಂಬದಿಂದ ಅಂಗಾಂಗ ದಾನದ ಮೂಲಕ ಇತರರ ಬಾಳಿಗೆ ಭರವಸೆಯ ಬೆಳಕು

ಅಂಗಾಂಗ ದಾನದ ಮೂಲಕ ಇತರರ ಬಾಳಿಗೆ ಭರವಸೆಯ ಬೆಳಕು

ಮಣಿಪಾಲ್ ಆಸ್ಪತ್ರೆಯ ನರರೋಗ ವಿಭಾಗದ ಹಿರಿಯ ತಜ್ಞರಾದ ಡಾ.ರಾಘವೇಂದ್ರ ಎಸ್. ಮತ್ತು ಡಾ. ಸ್ವಾತಿ ಸುರೇಂದ್ರನ್ ನಾಯರ್ ಅವರ ನೇತೃತ್ವದಲ್ಲಿ ಪರೀಕ್ಷೆ ನಡೆಸಿದಾಗ, ಅವರಿಗೆ ತೀವ್ರ ಸ್ವರೂಪದ ಪಾರ್ಶ್ವವಾಯು (Posterior Circulation Stroke) ಸಂಭವಿಸಿರುವುದು ಮತ್ತು ಮೆದುಳಿನ ಕಾಂಡಕ್ಕೆ (Brainstem) ಸರಿಪಡಿಸಲಾಗದ ಹಾನಿಯಾಗಿರುವುದು ಕಂಡು ಬಂದಿತು.

Kalaburagi Central Jail: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಎಣ್ಣೆ ಪಾರ್ಟಿ, ಇಸ್ಪೀಟ್‌ ಆಟ; ಕೈದಿಗಳ ಹೈಫೈ ಲೈಫ್‌ನ ವಿಡಿಯೊ ವೈರಲ್!

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಹೈಫೈ ಲೈಫ್; ವಿಡಿಯೊ ವೈರಲ್!

ವೈರಲ್ ವಿಡಿಯೊದಲ್ಲಿ ಕಲಬುರಗಿ ಜೈಲಿನ ಕೈದಿಗಳು ಬ್ರ್ಯಾಂಡೆಡ್ ಎಣ್ಣೆ ಸೇವಿಸುತ್ತಾ, ಸಿಗರೇಟ್ ಸೇದುತ್ತಾ, ಗುಂಪು ಗುಂಪಾಗಿ ಇಸ್ಪೀಟ್‌ ಆಟದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಬಿಗಿ ಭದ್ರತೆ ಇರುವ ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಸಪ್ಲೈ ಆಗುತ್ತಿವೆ ಎಂಬ ಪ್ರಶ್ನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ.

Dharmasthala Case: ಧರ್ಮಸ್ಥಳ ಪ್ರಕರಣ; ಶ್ರೀ ಕ್ಷೇತ್ರದ ಪರ ಹಿರಿಯ ನ್ಯಾಯವಾದಿ ಸಿವಿ ನಾಗೇಶ್, ಮಹೇಶ್ ಕಜೆ ವಕಾಲತ್ತು

ಧರ್ಮಸ್ಥಳ ಪರ ಖ್ಯಾತ ವಕೀಲ ಸಿವಿ ನಾಗೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಂಟ್ರಿ

ಇಡೀ ದೇಶದ ಗಮನ ಸೆಳೆದ, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಡಲಾಗಿದೆ ಎಂಬ ಆರೋಪದ ʼಬುರುಡೆ ಪ್ರಕರಣʼಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ನಡೆದಿದ್ದು, ಹಿರಿಯ ವಕೀಲರಾದ ಸಿ.ವಿ. ನಾಗೇಶ್ ಮತ್ತು ಮಹೇಶ್ ಕಜೆ ಅವರು ಧರ್ಮಸ್ಥಳ ಶ್ರೀ ಕ್ಷೇತ್ರದ ಪರ ವಕಾಲತ್ತು ವಹಿಸಲಿದ್ದಾರೆ. ವರದಿಗಳ ಪ್ರಕಾರ, ಇಬ್ಬರು ವಕೀಲರು ಇಂದು ಮಧ್ಯಾಹ್ನ 2:30ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಲಿದ್ದಾರೆ. ನ್ಯಾಯವಾದಿ ಸಿ.ವಿ.ನಾಗೇಶ್ ಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅನುಭವಿ ವಕೀಲರಾಗಿದ್ದು, ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಖ್ಯಾತರಾಗಿದ್ದಾರೆ; ಇವರು ನಟ ದರ್ಶನ್, ಹೆಚ್.ಡಿ. ರೇವಣ್ಣ, ಮತ್ತು ಮುರುಘಾ ಮಠದ ಸ್ವಾಮೀಜಿಗಳಂತಹ ಗಣ್ಯರ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ.

New Year 2026: ಹೊಸ ವರ್ಷಾಚರಣೆಗೆ ಮೆಟ್ರೋ, ಬಿಎಂಟಿಸಿ ಕೊಡುಗೆ; ತಡರಾತ್ರಿಯವರೆಗೂ ಸೇವೆ

ಹೊಸ ವರ್ಷಾಚರಣೆಗೆ ಮೆಟ್ರೋ, ಬಿಎಂಟಿಸಿ ಕೊಡುಗೆ; ತಡರಾತ್ರಿಯವರೆಗೂ ಸೇವೆ

ಹೊಸ ವರ್ಷದ ಹಿನ್ನೆಲೆ ಇಂದು ರಾತ್ರಿ ಹಾಗೂ ಜನವರಿ 1ರಂದು ಮೆಟ್ರೋ ವಿಶೇಷ ವೇಳಾಪಟ್ಟಿ ಜಾರಿಯಲ್ಲಿರಲಿದೆ. ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಸೇವಾ ಸಮಯವನ್ನ ತಡರಾತ್ರಿವರೆಗೆ ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋ ಕೊನೆಯ ರೈಲು ಸಮಯವನ್ನು ವಿಸ್ತರಿಸಲಾಗಿದೆ.

Bengaluru News: ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಡಿ.30ರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆತ್ಮಹತ್ಯೆಯ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

Renuka swamy murder case: ರೇಣುಕಾಸ್ವಾಮಿ ತಾಯಿಯನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಪ್ರಾಸಿಕ್ಯೂಷನ್‌ ಮನವಿ

ರೇಣುಕಾಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿಯಾಗಿಸಲು ಪ್ರಾಸಿಕ್ಯೂಷನ್‌ ಮನವಿ

ಹಿಂದಿನ ಹೇಳಿಕೆಗೂ ಈಗಿನ ಹೇಳಿಕೆಗೂ ದ್ವಂದ್ವದ ಹಿನ್ನೆಲೆಯಲ್ಲಿ ರತ್ನಪ್ರಭಾರನ್ನು ಪ್ರತಿಕೂಲ ಸಾಕ್ಷಿಯಾಗಿ ಪರಿಗಣಿಸಲು ಎಸ್‌ಪಿಪಿ (SPP) ಮನವಿ ಮಾಡಿದ್ದಾರೆ. ಎಸ್‌ಪಿಪಿ ಪ್ರಸನ್ನಕುಮಾರ್ ಸಲ್ಲಿಸಿದ ಮನವಿ ಬಗ್ಗೆ ಸೋಮವಾರ ನಿರ್ಧಾರ ಆಗಲಿದೆ. ರತ್ನಪ್ರಭಾ 8 ಅಂಶಗಳಲ್ಲಿ ಪ್ರಾಸಿಕ್ಯೂಷನ್ ವಿರುದ್ಧವೇ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ.

New Year 2026: ಹೊಸ ವರ್ಷಾಚರಣೆ ಬಿಗಿ, ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ಬಂದ್‌

ಹೊಸ ವರ್ಷಾಚರಣೆ ಬಿಗಿ, ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ಬಂದ್‌

ಹೊಸ ವರ್ಷದ ಹಿಂದಿನ ದಿನದಿಂದಲೇ ಭದ್ರತಾ ದೃಷ್ಟಿಯಿಂದ ನಗರದ ಒಳಭಾಗದ ಕೆಲ ರಸ್ತೆಗಳನ್ನು ಬಂದ್ ಮಾಡಿದ್ದು, ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆಗಳಲ್ಲಿ ರಾತ್ರಿ 10 ರಿಂದ ಮುಂಜಾನೆ 3 ಗಂಟೆವರೆಗೆ ಸಂಚಾರ ಬಂದ್ ಆಗಲಿದೆ. ಸಂಜೆ 4 ಗಂಟೆಯಿಂದ ಬೆಳಗ್ಗೆ 3 ಗಂಟೆವರೆಗೆ ಈ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.

Lokayukta Raid: ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕೂ ಹೆಚ್ಚು ಆಸ್ತಿ, ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

20 ದಿನದಲ್ಲಿ ಸಂಚಾರಿ ನಿಯಮ ಉಲ್ಲಂಘನೆ 58,352 ಪ್ರಕರಣ ದಾಖಲು, 2 ಲಕ್ಷ ದಂಡ ವಸೂಲಿ: ಎಸ್ಪಿ ಕುಶಾಲ್ ಚೌಕ್ಸೆ

20 ದಿನದಲ್ಲಿ ಸಂಚಾರಿ ನಿಯಮ ಉಲ್ಲಂಘನೆ, 2 ಲಕ್ಷ ದಂಡ ವಸೂಲಿ

ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವಿಕೆಯ ಬಿರುಸಿನ ಕಾರ್ಯಾಚರಣೆಗಳ ನಡುವೆ ಜನರಲ್ಲಿ ಅರಿವು ಮೂಡಿಸುವ ಪರಿಣಾಮಕಾರಿ ಚಟುವಟಿಕೆ ಕೈಗೊಳ್ಳಲಾಗುತ್ತಿದೆ. ಜಾಗೃತಿ ಜತೆಗೆ ತ್ವರಿಯ ಕಾರ್ಯಾ ಚರಣೆಯಿಂದಾಗಿ ಕಳೆದ ಸಾಲಿಗಿಂತಲೂ  ಈ ಭಾರಿ ಹೆಚ್ಚಿನ ಪ್ರಕರಣ ದಾಖಲಾಗುವಿಕೆ, ಆರೋಪಿಗಳ ಬಂಧನ, ಅಪಾರ ಪ್ರಮಾಣದ ಮಾಲು ವಶದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ.

Gauribidanur News: ಮಕ್ಕಳ‌‌‌ ಕಲಿಕೆಗೆ ಅಂಗನವಾಡಿ ಕೇಂದ್ರಗಳೇ ಬುನಾದಿ

ಮಕ್ಕಳ‌‌‌ ಕಲಿಕೆಗೆ ಅಂಗನವಾಡಿ ಕೇಂದ್ರಗಳೇ ಬುನಾದಿ

ಸರ್ಕಾರವು ಗ್ರಾಮೀಣ ಭಾಗದಲ್ಲಿನ ಗರ್ಭಿಣಿ ತಾಯಂದಿರು ಮತ್ತು ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪೌಷ್ಟಿಕಾಹಾರದ ಜೊತೆಗೆ ಮಕ್ಕಳಿಗೆ ಅಗತ್ಯ ವಿರುವ ಕಲಿಕೆಗಾಗಿ ವಿಶೇಷವಾಗಿ ಮೊದಲ ಹಂತದಲ್ಲಿ ತಾಲ್ಲೂಕಿನ 18 ಅಂಗನವಾಡಿ ಕೇಂದ್ರದಲ್ಲಿ ಮಾಂಟೆಸ್ಸರಿ ( ಎಲ್ ಕೆ ಜಿ ಮತ್ತು ಯುಕೆಜಿ) ತರಗತಿಗಳನ್ನು ಆರಂಭಿಸಲಾಗಿದೆ.

Bagepally News: ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ: ಎನ್.ವೆಂಕಟೇಶಪ್ಪ ಮನವಿ

ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ

ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉಚಿತ ಶಿಕ್ಷಣ ಒದಗಿಸು ತ್ತಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಇದೆ. ಆದರೂ, ಪೋಷಕರು ಆಂಗ್ಲಭಾಷೆ ಮತ್ತು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ದಿಂದ ಅಧಿಕ ಶುಲ್ಕ ನೀಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ

Vaikuntha Ekadashi: ಜಿಲ್ಲೆಯ ವಿವಿಧೆಡೆ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ

ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ

ವಿಷ್ಣು ದೇವರಿಗೆ ಪ್ರಿಯವಾದ ಈ ಪವಿತ್ರ ದಿನದಂದು ಮಾಡುವ ಪೂಜೆ ಮತ್ತು ಉಪವಾಸ, ವ್ರತಗಳು ವಿಶೇಷ ಫಲವನ್ನು ನೀಡುತ್ತದೆ ಎಂಬುದು ನಂಬಿಕೆ. ಈ ನಿಟ್ಟಿನಲ್ಲಿ ಬಹುತೇಕ ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಿಸಲಾಗುತ್ತದೆ. ಎಂದಿನಂತೆ ಈ ಬಾರಿಯೂ ಈ ದಿನದಲ್ಲಿ ಜಿಲ್ಲೆಯಾದ್ಯಂತ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ಶ್ರೀ ಸ್ವಾಮಿಯವರಿಗೆ ವಿಶೇಷ ಪೂಜಾಧಿಗಳು ನಡೆದವು.

ಪತ್ರಕರ್ತರ ತರಬೇತಿ ಕಾಲೇಜು ತೆರೆಯಲು 1 ಎಕರೆ ಭೂಮಿ ನೀಡುತ್ತೇವೆ: ಡಿ.ಕೆ. ಶಿವಕುಮಾರ್ ಘೋಷಣೆ

ಪತ್ರಕರ್ತರ ತರಬೇತಿ ಕಾಲೇಜು ತೆರೆಯಲು 1 ಎಕರೆ ಭೂಮಿ: ಡಿಕೆಶಿ

Bangalore Press Club awards: ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಮಾತನಾಡಿದ್ದಾರೆ. ಈ ವರ್ಷ ಬದುಕಿನಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ಪುರಸ್ಕೃತರಿಗೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಲಸಿಗರಿಗೆ ಬೆಣ್ಣೆ, ಕನ್ನಡಿಗರಿಗೆ ಸುಣ್ಣ; ಇದು ಕಾಂಗ್ರೆಸ್‌ ಸರ್ಕಾರದ ಹೊಸ ಗ್ಯಾರಂಟಿ ಎಂದ ನಿಖಿಲ್

ವಲಸಿಗರಿಗೆ ಬೆಣ್ಣೆ, ಕನ್ನಡಿಗರಿಗೆ ಸುಣ್ಣ; ನಿಖಿಲ್ ಕಿಡಿ

Nikhil Kumaraswamy: ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳನ್ನು ಸರ್ಕಾರವೇ ತೆರವುಗೊಳಿಸಿ, ಸರ್ಕಾರವೇ ಮುಂದೆ ನಿಂತು 11.20 ಲಕ್ಷ ರೂ.ಗಳ ಮನೆಗಳನ್ನು ಹಂಚಿಕೆ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಈ ಸಂಪೂರ್ಣ ಘಟನೆಯ ಹಿಂದೆ ಕೇರಳ ಕಾಂಗ್ರೆಸ್ ಹಸ್ತಕ್ಷೇಪ ಇದೆ ಎಂಬುದು ರಾಜ್ಯದ ಜನತೆಯ ಅರಿವಿಗೆ ಬಂದಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದೂರಿದ್ದಾರೆ.

MLC Ramesh Babu: ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ಎಂಎಲ್‌ಸಿ ರಮೇಶಬಾಬು ಆಗ್ರಹ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

Chikkanayakanahalli News: ಚಿಕ್ಕನಾಯಕನಹಳ್ಳಿ, ತಾಲೂಕಿನ ಗ್ರಾಮೀಣ ಭಾಗದ ಯುವಕರಿಗೆ ತಾಂತ್ರಿಕ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಜಿಟಿಟಿಸಿ (GTTC) ತರಬೇತಿ ಕೇಂದ್ರ ಹಾಗೂ ಹೊಸದಾಗಿ ಸರ್ಕಾರಿ ಐಟಿಐ ಕಾಲೇಜು ಆರಂಭಿಸುವಂತೆ ವಿಧಾನಪರಿಷತ್ ಸದಸ್ಯ ರಮೇಶಬಾಬು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಜೈಲಾಧಿಕಾರಿ ಪತ್ರ

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಪತ್ರ

RD Patil: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್‌ ಕಿರಿಕ್‌ ಮಿತಿಮೀರಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಬೇರೆ ಜೈಲಿಗೆ ವರ್ಗಾಯಿಸುವಂತೆ ಜೈಲು ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ಕಾರಾಗೃಹ ಇಲಾಖೆಯ ಡಿಐಜಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

Amazing Pet Planet: ಅಮೇಜಿಂಗ್ ಪೆಟ್ ಪ್ಲಾನೆಟ್; ಶಿರಸಿಯಲ್ಲಿದೆ ಒಂದು ಪುಟ್ಟ ಪ್ರಾಣಿ ಸಾಮ್ರಾಜ್ಯ!

ಅಮೇಜಿಂಗ್ ಪೆಟ್ ಪ್ಲಾನೆಟ್; ಶಿರಸಿಯಲ್ಲಿದೆ ಒಂದು ಪುಟ್ಟ ಪ್ರಾಣಿ ಸಾಮ್ರಾಜ್ಯ!

ಇದು ಪ್ರಾಣಿ-ಪಕ್ಷಿಗಳ ಅನಾಥಾಶ್ರಮವಾಗಿದೆ. ಪ್ರಾಣಿಪ್ರಿಯ ವೈದ್ಯ ಡಾ. ರಾಜೇಂದ್ರ ಸಿರ್ಸಿಕರ್ ಮತ್ತು ​ಪೂಜಾರಾಜ್ ಸಿರ್ಸಿಕರ್ ದಂಪತಿ ಈ 'ಅಮೇಜಿಂಗ್ ಪೆಟ್ ಪ್ಲಾನೆಟ್' ಅನ್ನು ನಡೆಸುತ್ತಿದ್ದಾರೆ. ರಸ್ತೆ ಅಪಘಾತಕ್ಕೊಳಗಾದ ಮತ್ತು ಅನಾರೋಗ್ಯಕ್ಕೆ ತುತ್ತಾದ ಅನಾಥ ಪ್ರಾಣಿ-ಪಕ್ಷಿಗಳನ್ನು ಈ ದಂಪತಿ ರಕ್ಷಿಸಿ ತಂದು, ತಮ್ಮ ಸ್ವಂತ ಹಣದಲ್ಲಿ ಪೋಷಿಸುತ್ತಿದ್ದಾರೆ.

ಕೇರಳಿಗರು ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ, ಬಿಜೆಪಿಗರು ಹುಳಿ ಹಿಂಡಬೇಡಿ ಎಂದ ಡಿ.ಕೆ.ಶಿವಕುಮಾರ್‌

ಕೇರಳಿಗರು ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ಡಿ.ಕೆ.ಶಿವಕುಮಾರ್‌

ರಾಜೀವ್ ಚಂದ್ರಶೇಖರ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, “ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ.

K C Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಪ್ರಕರಣದಲ್ಲಿ ಶಾಸಕನಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಸುಮಾರು 30 ಕಡೆ ನಡೆದ ದಾಳಿಯಲ್ಲಿ ನಗದು, ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಡ; ಸೈಕೋ ಪತಿ ವಿರುದ್ಧ ಪತ್ನಿ ದೂರು

ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಪತಿ ಒತ್ತಡ; ಪತ್ನಿ ದೂರು

Bengaluru News: ಬೆಂಗಳೂರಿನಲ್ಲಿ ಮಂಜುನಾಥ್‌ ಎಂಬಾತನ ವಿರುದ್ಧ ಪತ್ನಿ ದೂರು ನೀಡಿದ್ದಾಳೆ. ಈ ದಂಪತಿ ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಮದುವೆಯಾದ ಮೂರೇ ತಿಂಗಳಿಗೆ ಪತಿಯ ವರ್ತನೆಗೆ ಬೇಸತ್ತ ಹೆಂಡತಿ, ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ.

Hulikal Ghat Bus Accident: ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ; ಮಗು ಸಾವು, ಹಲವರಿಗೆ ಗಾಯ

ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ ಅಪಘಾತ; ಮಗು ಸಾವು, ಹಲವರಿಗೆ ಗಾಯ

Bus Accident in Shivamogga: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ದುರ್ಗಾಂಬ ಬಸ್, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್‌ ಘಾಟ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮಗು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಕ್ರಮ ವಲಸಿಗರಿಗೆ ಮನೆ; ರಾಜ್ಯ ಸರ್ಕಾರದ ವಿರುದ್ಧ ಬೃಹತ್‌ ಹೋರಾಟಕ್ಕೆ ಮುಂದಾದ ಬಿಜೆಪಿ

ಅಕ್ರಮ ವಲಸಿಗರಿಗೆ ಮನೆ; ಬೃಹತ್ ಹೋರಾಟಕ್ಕೆ ಮುಂದಾದ ಬಿಜೆಪಿ

BY Vijayendra: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ವಲಸಿಗರಿಗೆ ಅಕ್ರಮವಾಗಿ ಮನೆ ಕೊಡುವುದಾಗಿ ಘೋಷಿಸಿದ್ದು ಖಂಡಿತಕ್ಕೂ ಕಾನೂನಿನ ವಿರುದ್ಧವಾದುದು. ಸಿಎಂ, ಡಿಸಿಎಂ ನಿರ್ಧಾರವೇ ಅಕ್ರಮ. ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ಆಗುವಂತೆ ಯಾಕೆ ಇಂಥ ನಿರ್ಧಾರ ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

Kogilu House Demolitions: ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ ಎಂದ ಡಿ.ಕೆ. ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಕೆಶಿ

DK Shivakumar: ಕೋಗಿಲು ವಿಚಾರವಾಗಿ ಪಾಕಿಸ್ತಾನದ ವಿದೇಶಾಂಗ ಸಚಿವರು ಪ್ರತಿಕ್ರಿಯೆ ನೀಡಿರುವ ಕುರಿತು ಮಾಧ್ಯಮಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದಾರೆ. ಇದಕ್ಕೆ ದೇಶದ ಹಿರಿಯ ನಾಯಕರು ಉತ್ತರಿಸಲಿದ್ದಾರೆ. ಇನ್ನು ಎರಡೆರಡು ರಾಜ್ಯದ ಆಧಾರ್ ಕಾರ್ಡ್‌ಗಳು, ಮತದಾರರ ಚೀಟಿಗಳು ಸಂತ್ರಸ್ತರ ಬಳಿ ಇರುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

Karnataka MLC elections: ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕದ ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಎಐಸಿಸಿ ಪ್ರಕಟಿಸಿದೆ. 2026ರ ನವೆಂಬರ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

Loading...