80ʼs ಫೋಟೊ ಟ್ರೆಂಡ್: ಸೈಬರ್ ವಂಚಕರ ಮೋಸದ ಬಗ್ಗೆ ಪೊಲೀಸರಿಂದ ಎಚ್ಚರಿಕೆ
80's AI Photo Trend: ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಭಾರಿ ವೈರಲ್ ಆಗುತ್ತಿರುವ '80s AI ಫೋಟೋ ಟ್ರೆಂಡ್' (1980ರ ದಶಕದ ರೆಟ್ರೋ ಲುಕ್ ಫೋಟೋ) ಬಗ್ಗೆ ಸೈಬರ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
ಎಸ್ಐಟಿ ಮತ್ತು ಔಷಧ ನಿಯಂತ್ರಣ ಇಲಾಖೆಯ ಸುಮಾರು 80 ರಿಂದ 100 ಅಧಿಕಾರಿಗಳ ತಂಡವು ಕರ್ನಾಟಕ, ಹಿಮಾಚಲ ಪ್ರದೇಶ, ಹರಿಯಾಣ, ತಮಿಳುನಾಡು, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ದಾಳಿ ನಡೆಸಿದೆ. ನಕಲಿ ಫಾಮ್ಗಳ ಕಚೇರಿಗಳು, ಔಷಧ ಸಂಗ್ರಹಣಾ ಕೇಂದ್ರಗಳು ಮತ್ತು ಕಿಂಗ್ಪಿನ್ಗಳ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಳ್ಳಲಾಗಿದೆ.
ಬಂದೂಕುಗಳ ನಿಯಂತ್ರಣ ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯದ ಅಂಚಿನಲ್ಲಿ ವಾಸಿಸುವ ಜನರು ತಮ್ಮ ಬಳಿಯಿರುವ ಪರವಾನಗಿ ರಹಿತ ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಒಪ್ಪಿಸಬೇಕು. ಇಲ್ಲ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂದಿನ ವರ್ಷಗಳ ಪೂರೈಕೆಗೆ ಹೋಲಿಸಿದರೆ ಈ ಬಾರಿ ಖರೀದಿಸಲಾದ ಪಾದರಕ್ಷೆಗಳು ಕಳಪೆಯಾಗಿದ್ದು, ಖರೀದಿ ಪ್ರಕ್ರಿಯೆ ಹಾಗೂ ಮೇಲ್ವಿಚಾರಣೆಯಲ್ಲಿ ವ್ಯವಸ್ಥಿತ ಭ್ರಷ್ಟಾಚಾರ ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವು ದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿರುವುದನ್ನು ನ್ಯಾಯಮೂರ್ತಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.
ತನಿಖೆಯ ಸಂದರ್ಭದಲ್ಲಿ ಮೂವರು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗ ದಿರುವುದು ಕೂಡ ಗಮನಕ್ಕೆ ಬಂದಿತ್ತು. ಪ್ರಕರಣದ ಮುಂದಿನ ತನಿಖೆಗಾಗಿ ಕೆಪಿಎಸ್ಸಿ ಆಂತರಿಕ ಸಮಿತಿ ರಚಿಸಿತ್ತು. ಕೆಪಿಎಸ್ಸಿ ಸದಸ್ಯ ಶಾಂತ ಹೊಸಮನಿ ನೇತೃತ್ವದಲ್ಲಿ ಸಮಿತಿ ರಚನೆಯಾಗಿತ್ತು. ಬಳಿಕ ವಿಜಯ್ಕುಮಾರ್ ನೇತೃತ್ವದಲ್ಲಿ ಮತ್ತೊಂದು ಉಪಸಮಿತಿ ರಚಿಸಿ, 24 ಅಭ್ಯರ್ಥಿಗಳ ಒಎಂಆರ್ ಶೀಟ್ಗಳು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು
ಪ್ರಸ್ತುತ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸ ಲಾಗುತ್ತಿದೆ. ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತ್ವರಿತವಾಗಿ ದೂರು ಸ್ವೀಕರಿಸಿ ಪರಿಹರಿಸಲು 8884777235 ಸಹಾಯವಾಣಿ ಆರಂಭಿಸಲಾಗಿದೆ. ಇದುವರೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ, ನೀರಿನ ಪೈಪ್ಲೈನ್ ಹಾಗೂ ಜಲಜೀವನ್ ಮಿಷನ್ ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದಂತೆ 116 ಕರೆಗಳು ಬಂದಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸ ಲಾಗಿದೆ
ಸೆ.12ರಂದು ಬಶೇಟಹಳ್ಳಿ ಕೆಎನ್ಎಸ್ ಶಾಲೆಯಲ್ಲಿ ಪ್ರಜಾ ಸೇವಾ ಆಂದೋಲನ ನಡೆಯಲಿದೆ. ಬಶೆಟ್ಟ ಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಅಹವಾಲು ಗಳನ್ನು ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿದೆ. ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ
ಗ್ರಾಮೀಣ ಪ್ರದೇಶಗಳ ರಸ್ತೆ, ಚರಂಡಿ, ಶಾಲಾ ಹಾಗೂ ಅಂಗನವಾಡಿ ಕೊಠಡಿಗಳ ನಿರ್ಮಾಣ, ಸೇತುವೆ, ಚೆಕ್ಡ್ಯಾಂ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಹಲವು ಜನೋಪಯೋಗಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಕೆಲವರಿಗೆ ತಾಲೂಕಿನಲ್ಲಾಗಿರುವ ಅಭಿವೃದ್ಧಿ ಕಾಮಗಾರಿಗಳು ಕಾಣಿಸುತ್ತಿಲ್ಲ ಎಂದು ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ವ್ಯಂಗ್ಯವಾಡಿದರು
ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಶಿಡ್ಲಘಟ್ಟ ನಗರ ಠಾಣೆ ಪೊಲೀಸರು, ನಗರದ ವಿವಿಧೆಡೆ ವಾಹನಗಳನ್ನು ತಡೆದು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದರು. ನಗರ ಠಾಣೆ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಸಿಬ್ಬಂದಿ ಪ್ರಮುಖ ರಸ್ತೆಗಳು ಹಾಗೂ ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವಾಹನ ಚಾಲಕರನ್ನು ಪರಿಶೀಲಿಸಿದರು.
Tumkur News: ತುಮಕೂರಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೆ. 12ರಂದು ಬೆಳಗ್ಗೆ 11ಕ್ಕೆ 17ನೇ ಪದವಿ ಪ್ರದಾನ ಸಮಾರಂಭ ಅತ್ಯಂತ ವಿಜೃಂಭಣೆಯಿಂದ ಏರ್ಪಾಡಾಗಿದ್ದು, ವಿವಿಧ ವಿಭಾಗಗಳ ಸುಮಾರು 1,400ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಸಿದ್ಧಗಂಗಾ ಎಜ್ಯುಕೇಷನ್ ಸೊಸೈಟಿಯ ಜಂಟಿ ಕಾರ್ಯದರ್ಶಿ ಡಾ. ಶಿವಕುಮಾರಯ್ಯ ತಿಳಿಸಿದ್ದಾರೆ.
ಈ ಇಬ್ಬರೂ ಪ್ರಯಾಣಿಸಿದ್ದು ದೆಹಲಿಯಿಂದ ಬೆಂಗಳೂರಿಗೆ. ಒಟ್ಟು 2,075 ಕಿಲೋ ಮೀಟರ್ಅಂತರದ ಪ್ರಯಾಣ ಅದು. ಈ ದೂರವನ್ನು ಈ ಈರ್ವರೂ ಚಾಲಕರು ಕೇವಲ 29 ಗಂಟೆಗಳಲ್ಲಿ ಕ್ರಮಿಸಿದ್ದು ನಿಬ್ಬೆರಗಾಗುವ ದಾಖಲೆಯೇ ಹೌದು. ಒಂದು ದೇಶದಲ್ಲಿ ಕಾರಿನಲ್ಲಿ ಅತೀ ದೀರ್ಘದ ನಿರಂತರ ಪ್ರಯಾಣ ಕ್ಕಾಗಿ ಕೇಶವಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಬೈಪಾಡಿ ತ್ತಾಯ ಅವರಿಗೆ ಜಂಟಿಯಾಗಿ ವಿಶ್ವದಾಖಲೆಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರಧಾನ ಮಾಡಲಾಯಿತು.
Sri Raghaveshwara Bharathi Swamiji: ಜೀವನದಲ್ಲಿ ನಾವು ಸುಲುಭದ ದಾರಿ ಹುಡುಕಬಾರದು. ಸರಿಯಾದ ದಾರಿಯನ್ನೇ ಆರಿಸಿಕೊಳ್ಳಬೇಕು. ಶಾಸ್ತ್ರಗಳು ಬೋಧಿಸಿರುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ಪ್ರಯತ್ನಪೂರ್ವಕವಾಗಿ ನಾವು ಜೀವನ ಪದ್ಧತಿಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.
Priyank Kharge: ಸರ್ಕಾರದ ಪರವಾಗಿ ನ್ಯಾಯಾಲಯಗಳಲ್ಲಿ ವಾದಿಸುವ ವಕೀಲರಿಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿ ಸಮಯಕ್ಕೆ ಸರಿಯಾಗಿ ತಲುಪುವುದು, ಇಲಾಖೆಗಳ ನಡುವೆ ನಿರಂತರ ಸಮನ್ವಯ, ಪ್ರಕರಣಗಳ ಪರಿಣಾಮಕಾರಿ ಮೇಲ್ವಿಚಾರಣೆ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ ಈ ನಾಲ್ಕೂ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸರ್ಕಾರದ ಪ್ರಕರಣಗಳ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Dr G Parameshwara: ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುವುದಾಗಿ ಸಿದ್ದರಾಮಯ್ಯ ಮೊದಲಿನಿಂದಲೂ ಹೇಳುತ್ತ ಬಂದಿದ್ದರು. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದು ಮುಗಿದು ಹೋದ ಅಧ್ಯಾಯ. ಈ ವಿಚಾರವಾಗಿ ಪುನಃ ಪುನಃ ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
Priyank Kharge: ಬ್ರಿಕ್ಸ್ ವೇದಿಕೆಯಲ್ಲಿ ಭಾರತದ ರೂಪಾಯಿಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದಾಗಿ ಹಾಗೂ ಜಾಗತಿಕ ಮಟ್ಟದಲ್ಲಿ ವ್ಯವಹರಿಸಬಹುದಾದ ಕರೆನ್ಸಿಯಾಗಿ ರೂಪಿಸುವುದಾಗಿ ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇಂದು ರೂಪಾಯಿ ಮೌಲ್ಯ ಕುಸಿತ ಕಾಣುತ್ತಿದ್ದು, ಡಾಲರ್ ಎದುರು ರೂಪಾಯಿ ಹೊಸ ತಳಮಟ್ಟಗಳನ್ನು ತಲುಪುತ್ತಿರುವುದು ಆರ್ಥಿಕ ನೀತಿಯ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
DK Shivakumar: ರಾಷ್ಟ್ರಗಾನ 'ವಂದೇ ಮಾತರಂ'ನ ಎಲ್ಲ 6 ಚರಣಗಳನ್ನು ಕಡ್ಡಾಯವಾಗಿ ಹಾಡಬೇಕೆಂದು ಕೇಂದ್ರ ಸರ್ಕಾರ ಕಾಯ್ದೆ ಮಾಡಿದ್ದರೂ, ರಾಜ್ಯ ಸರ್ಕಾರ ಬರೀ 2 ಚರಣ ಹಾಡುವುದಾಗಿ ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದು, ಸರ್ಕಾರದ ನಿಲುವು ಸಮರ್ಥಿಸಿಕೊಂಡಿದ್ದಾರೆ.