ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಐಟಿ ವ್ಯವಸ್ಥೆಯ ತುರ್ತು ನಿರ್ವಹಣೆ; ಅ.24, 25ರಂದು ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

ಅ.24, 25ರಂದು ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

Karnataka escoms: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ಲೈನ್‌ ಆಧರಿತ ಸೇವೆಗಳು ಅಕ್ಟೋಬರ್ 24ರಂದು ರಾತ್ರಿ 8 ಗಂಟೆಯಿಂದ ಅ.25ರ ಮಧ್ಯಾಹ್ನ1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

SV Rajendrasingh Babu: ಬೆಂಗಳೂರಿನಲ್ಲಿ ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

SVR @ 50: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ʼಎಸ್‌ವಿಆರ್ @ 50ʼ ಸಾಧನೆ-ಸಂಭ್ರಮ-ಚಿತ್ರೋತ್ಸವವನ್ನು ಅ.23ರಿಂದ 27ರವರೆಗೆ ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಡಾ.ರಾಜ್‌ಕುಮಾರ್‌ ಭವನ, ಅಂಬರೀಷ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

Karnataka Weather: ನಾಳೆ ಉಡುಪಿ, ಕೊಡಗು ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ನಿರೀಕ್ಷೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Ramanagara News: ಹೆಂಡತಿ ಟಾರ್ಚರ್‌ ತಾಳಲಾರದೆ ರೈಲಿಗೆ ತಲೆಕೊಟ್ಟು ಗಂಡ ಆತ್ಮಹತ್ಯೆ!

ಹೆಂಡತಿ ಟಾರ್ಚರ್‌ ತಾಳಲಾರದೆ ರೈಲಿಗೆ ತಲೆಕೊಟ್ಟು ಗಂಡ ಆತ್ಮಹತ್ಯೆ!

Self Harming: ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇವಂತ್ ಕುಮಾರ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐದು ತಿಂಗಳ ಹಿಂದೆ ಈತ ವಿವಾಹವಾಗಿದ್ದ. ಆದರೆ, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಯಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Dr G Parameshwar: ಡಿಸಿ ಜತೆ ಬೆಟ್ಟಿಂಗ್ ಕಟ್ಟಿ ಸೋಲು; ವ್ಯಾಪಕ ಟೀಕೆಗೆ ಗುರಿಯಾದ ಡಾ.ಜಿ. ಪರಮೇಶ್ವರ್

ಡಿಸಿ ಜತೆ ಬೆಟ್ಟಿಂಗ್ ಕಟ್ಟಿ ವ್ಯಾಪಕ ಟೀಕೆಗೆ ಗುರಿಯಾದ ಪರಮೇಶ್ವರ್

Tumkur News: ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಫೈನಲ್‌ ಪಂದ್ಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಜಯಪುರ ತಂಡ ಗೆಲ್ಲುತ್ತದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ಆದರೆ, ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಪರಮೇಶ್ವರ್‌ ಬಾಜಿ ಹಣವನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಬಹುಮಾನ ವಿತರಣೆ ಸಮಯದಲ್ಲಿ ಸಚಿವ ಪರಮೇಶ್ವರ್ ಹೇಳಿದ್ದಾರೆ.

DK Shivakumar: ಭೂಮಿ ದಾಖಲೆ ನೀಡುವುದು ನಮ್ಮ 6ನೇ ಗ್ಯಾರಂಟಿ: ಡಿ.ಕೆ. ಶಿವಕುಮಾರ್‌

ಭೂಮಿ ದಾಖಲೆ ನೀಡುವುದು ನಮ್ಮ 6ನೇ ಗ್ಯಾರಂಟಿ: ಡಿ.ಕೆ. ಶಿವಕುಮಾರ್‌

State Congress Government: ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Pavagada News: ಪಟಾಕಿಯಿಂದ ಗಾಯಗೊಂಡ ಬಾಲಕನ ದೃಷ್ಟಿ ಉಳಿಸಿದ ಶಾರದಾದೇವಿ ಕಣ್ಣಿನ ಆಸ್ಪತ್ರೆ ವೈದ್ಯರು

ಪಟಾಕಿಯಿಂದ ಗಾಯ; ಬಾಲಕನ ದೃಷ್ಟಿ ಉಳಿಸಿದ ಶಾರದಾದೇವಿ ಆಸ್ಪತ್ರೆ ವೈದ್ಯರು

Deepavali 2025: ಪಾವಗಡ ತಾಲೂಕಿನ ಬುಡ್ಡಾರೆಡ್ಡಿ ಹಳ್ಳಿಯ ಬಾಲಕ, ಸೋಮವಾರ ದೀಪಾವಳಿಯ ಪ್ರಯುಕ್ತ ಹೂಬಾಣವನ್ನು ತನ್ನ ಮನೆಯ ಮುಂದೆ ಹಚ್ಚಲು ಪ್ರಯತ್ನಿಸಿದಾಗ ಎಡಗಣ್ಣಿಗೆ ಬೆಂಕಿಯ ಕಿಡಿಗಳು ಹಾರಿ ದೃಷ್ಟಿ ಅಪಾಯದಲ್ಲಿತ್ತು. ಹೀಗಾಗಿ ಆತನನ್ನುಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಸಂಸ್ಥೆಯ ಮುಖ್ಯ ನೇತ್ರ ತಜ್ಞರು ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿ ಬಾಲಕನ ದೃಷ್ಟಿ ಉಳಿಸಿದ್ದಾರೆ.

BY Vijayendra: ಬಿಜೆಪಿ- ಜೆಡಿಎಸ್ ಪಕ್ಷದ ಸಮನ್ವಯ ಸಮಿತಿ ಶೀಘ್ರ ರಚನೆ: ಬಿ.ವೈ.ವಿಜಯೇಂದ್ರ

ಬಿಜೆಪಿ- ಜೆಡಿಎಸ್ ಪಕ್ಷದ ಸಮನ್ವಯ ಸಮಿತಿ ಶೀಘ್ರ ರಚನೆ: ವಿಜಯೇಂದ್ರ

BJP-JDS Coordination Committee: ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡೋಣ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Udaala Movie: ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Sandalwood News: ಯೋಗರಾಜ್ ಭಟ್ ನಿರ್ಮಾಣದ, ಅಮೋಲ್ ಪಾಟೀಲ್ ನಿರ್ದೇಶನದ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ʼಉಡಾಳʼ ಚಿತ್ರವು ನವೆಂಬರ್ 14ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಕುರಿತ ವಿವರ ಇಲ್ಲಿದೆ.

I Am Ruby Movie: ಚೇತನ್ ಕೇಶವ್ ನಿರ್ದೇಶನದ ʼI Am ರೂಬಿʼ ಚಿತ್ರದ ಶೀರ್ಷಿಕೆ ಅನಾವರಣ

ಚೇತನ್ ಕೇಶವ್ ನಿರ್ದೇಶನದ ʼI Am ರೂಬಿʼ ಚಿತ್ರದ ಶೀರ್ಷಿಕೆ ಅನಾವರಣ

Sandalwood News: ಚೇತನ್ ಕೇಶವ್ ನಿರ್ದೇಶನದ ಎರಡನೇ ಸಿನಿಮಾದ ಶೀರ್ಷಿಕೆ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಅನಾವರಣವಾಗಿದೆ. ಆಕಾಶ್ ಎಂಬ ಮೈಸೂರಿನ ನೂತನ ಪ್ರತಿಭೆ ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ʼI Am ರೂಬಿʼ ಎಂದು ಹೆಸರಿಡಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ಮೆಟ್ರೋಗೆ ರಾಜ್ಯ ಸರ್ಕಾರದಿಂದಲೇ ಶೇ.87ರಷ್ಟು ಹಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಮೆಟ್ರೋಗೆ ಶೇ.87ರಷ್ಟು ಹಣ ಕೊಡುವುದು ನಾವೇ: ಸಿಎಂ ಸಿದ್ದರಾಮಯ್ಯ

CM Siddaramaiah: ಬೆಂಗಳೂರಿನ ಮೆಟ್ರೋಗೆ ಶೇ.87ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ; ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದ ಸಿಎಂ

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ ಎಂದ ಸಿಎಂ

CM Siddaramaiah: ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲ ಮುಚ್ಚಲು ಸಿಎಂ ಸಿದ್ದರಾಮಯ್ಯ ಆದೇಶ

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲ ಮುಚ್ಚಲು ಸಿಎಂ ಸಿದ್ದರಾಮಯ್ಯ ಆದೇಶ

Bengaluru: ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಮದರಸಾ ಸಿಬ್ಬಂದಿಯಿಂದ ಹಲ್ಲೆ, ಪ್ರಾಣ ಬೆದರಿಕೆ: ಜೀವ ರಕ್ಷಣೆಗಾಗಿ ದೂರು ದಾಖಲು

ಮದರಸಾ ಸಿಬ್ಬಂದಿಯಿಂದ ಹಲ್ಲೆ, ಪ್ರಾಣ ಬೆದರಿಕೆ

ಥಣಿಸಂದ್ರದ ತಮ್ಮ ಸ್ವತ್ತಿನ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪದೇ ಪದೇ ಅಡ್ಡಿಪಡಿಸುತ್ತಿರುವ ಜೊತೆಗೆ ಮಹಿಳೆ ಮತ್ತು ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಮದರಸ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Self Harming: ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ

Bengaluru Crime: ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

SIRA News: ದಿಲ್‌ಮಾರ್ ಚಲನಚಿತ್ರ ೧೦೦ ದಿನ ಯಶಸ್ವಿ ಪ್ರದರ್ಶನ ಕಾಣಲಿ; ಆರ್.ಉಗ್ರೇಶ್

ಅಕ್ಟೋಬರ್ 24ಕ್ಕೆ ರಾಜ್ಯಾದ್ಯಂತ ದಿಲ್ ಮಾರ್ ಚಲನಚಿತ್ರ ಬಿಡುಗಡೆ

ಶಿರಾ ತಾಲೂಕಿನ ಕೃಷ್ಣೇಗೌಡ ಅವರ ಸುಪುತ್ರ ರಾಮ್ ಗೌಡ ಅವರು ದಿಲ್ ಮಾರ್ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರನ್ನು ನಮ್ಮ ತಾಲೂಕಿನವರೆಲ್ಲರೂ ಪ್ರೋತ್ಸಾಹಿಸಬೇಕು. ಚಲನಚಿತ್ರವನ್ನು ಕುಟುಂಬ ಸಮೇತ ಹೋಗಿ ಚಿತ್ರ ಮಂದಿರದಲ್ಲಿ ನೋಡಿ ಪ್ರೋತ್ಸಾಹಿಸಬೇಕು. ಗ್ರಾಮೀಣ ಪ್ರತಿಭೆಯನ್ನು ಬೆಳೆಸಬೇಕು

ಪ್ರೆಸಿಡೆನ್ಸಿ ವಿದ್ಯಾಸಂಸ್ಥೆ ಸಾವಿರಾರು ಮಕ್ಕಳ ಬದುಕಿನಲ್ಲಿ ಜ್ಞಾನ ದೀವಿಗೆ ಹಚ್ಚಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

ಶಿರಾ ಪ್ರೆಸಿಡೆನ್ಸಿ ಶಾಲೆಯಲ್ಲಿ ಪ್ರತಿಭೋತ್ಸವ

ಫ್ರೆಸಿಡೆನ್ಸಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ಕಳೆದ ೧೭ ವರ್ಷದಲ್ಲಿ ೪೫೦೦ ವಿದ್ಯಾರ್ಥಿ ಗಳು ಇಂಜಿನಿಯರ್‌ಗಳಾಗಿದ್ದಾರೆ, ೬೦೦ ವಿದ್ಯಾರ್ಥಿಗಳು ಅಗ್ರಿಕಲ್ಚರ್, ಬಿವಿಎಸ್ ಓದಿದ್ದಾರೆ, ೩೦೦ ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್. ವಿದ್ಯಾಭ್ಯಾಸ ಮಾಡಿ ದೇಶದ ವಿವಿಧ ಭಾಗ ಹಾಗೂ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

Digital Arrest: ಬೆಂಗಳೂರಿನ ನಿವೃತ್ತ ಅಧಿಕಾರಿಗೆ 14 ದಿನಗಳ ಕಾಲ ಡಿಜಿಟಲ್‌ ಆರೆಸ್ಟ್‌, ₹1.62 ಕೋಟಿ ವಂಚನೆ

ನಿವೃತ್ತ ಅಧಿಕಾರಿಗೆ 14 ದಿನ ಡಿಜಿಟಲ್‌ ಆರೆಸ್ಟ್‌, ₹1.62 ಕೋಟಿ ವಂಚನೆ

Cyber Crime: ನಿಮ್ಮ ವಿರುದ್ಧ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಡಿಯೋ ಕಾಲ್​​ ಮಾಡಿದ ವ್ಯಕ್ತಿ ಹೇಳಿದ್ದಾನೆ. ಈ ಕಾರಣಕ್ಕೆ ನಿಮ್ಮನ್ನು ಬಂಧನ ಮಾಡಲಾಗುವುದು ಎಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡು ತನ್ನ ಉಳಿತಾಯ ಮತ್ತು ಸ್ಥಿರ ಠೇವಣಿ ವಿವರಗಳನ್ನು ವಂಚಕನೊಂದಿಗೆ ಹಂಚಿಕೊಂಡಿದ್ದಾರೆ.

CM Siddaramaiah: ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭ: ಸಿಎಂ ಸಿದ್ದರಾಮಯ್ಯ

Nandi Hills: ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ನಾಗರೀಕರಿಗಾಗಿ ಮನೆ ಮನೆಗೆ ಪೊಲೀಸ್ ಜಾರಿ ಮಾಡಿದ್ದೇವೆ. ಎಸ್‌ಸಿ, ಎಸ್‌ಟಿ ಜನರ ರಕ್ಷಣೆಗೆ ಡಿಸಿಆರ್‌ಎ ಠಾಣೆ ತೆರೆದಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಾಗಿ 10 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Assault Case: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಮಾಡಿದ ಅಧ್ಯಾಪಕ

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನುಷ ಹಲ್ಲೆ

Chitrdadurga: ಆ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದು, ಆ ಶಿಕ್ಷಕನ ಕ್ರೌರ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕ್ರೋಶದಿಂದ ಪುಟ್ಟ ವಿದ್ಯಾರ್ಥಿ ಮೇಲೆ ಈ ರೀತಿ ಅಮಾನುಷವಾಗಿ ಶಿಕ್ಷಕ ಕ್ರೌರ್ಯ ಮೆರೆದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ.

Putturu: ಪುತ್ತೂರಿನಲ್ಲಿ ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪುತ್ತೂರಿನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Putturu: ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ದೀಪಾವಳಿ ಪ್ರಯುಕ್ತ 13ನೆ ವರ್ಷದ (ವಸ್ತ್ರ ವಿತರಣಾ) ಜನಮನ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ‌

Fire crackers: ಬೆಂಗಳೂರಲ್ಲಿ ಪಟಾಕಿ ಸಿಡಿತದ ವೇಳೆ 8 ಜನರಿಗೆ ಗಾಯ

ಬೆಂಗಳೂರಲ್ಲಿ ಪಟಾಕಿ ಸಿಡಿತದ ವೇಳೆ 8 ಜನರಿಗೆ ಗಾಯ

ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಹೀಗಾಗಿ ಮಾಲಿನ್ಯ ರಹಿತವಾಗಿ ಆಚರಿಸಲು ಮನವಿ ಮಾಡಲಾಗಿದೆ.

Karnataka Weather: ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಇಂದು ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಅಕ್ಟೋಬರ್ 20 ರಿಂದ 23 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35 ಕಿ.ಮೀ- 55ಕಿ.ಮೀ ವೇಗದಲ್ಲಿ ಬೀಸುವುದರಿಂದ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Seekal Ramachandra Gowda: ಹೆಮ್ಮರವಾಗಿ ಬೆಳೆದಿರುವ ಆರ್.ಎಸ್.ಎಸ್ ನಿಷೇಧ ಸಾಧ್ಯವಿಲ್ಲ : ಸೀಕಲ್ ರಾಮಚಂದ್ರಗೌಡ

ಹೆಮ್ಮರವಾಗಿ ಬೆಳೆದಿರುವ ಆರ್.ಎಸ್.ಎಸ್ ನಿಷೇಧ ಸಾಧ್ಯವಿಲ್ಲ

ದೇಶಕ್ಕೆ ಗಂಡಾಂತರ ಎದುರಾದಾಗಲೆಲ್ಲಾ ದೇಶರಕ್ಷಣೆಗೆ ಆರ್‌ಎಸ್‌ಎಸ್ ನಿಂತಿದೆ. ಇಂತಹ ಸಂಘಟನೆ ಯನ್ನು ನಿಷೇಧಿಸಲು ನೆಹರು ,ಇಂದಿರಾಗಾಂಧಿ ಪ್ರಯತ್ನಿಸಿ ಸೋತಿದ್ದಾರೆ. ಇನ್ನು ಪ್ರಿಯಾಂಕ ಖರ್ಗೆ ಮತ್ತು ಅವರ ಸರಕಾರದಿಂದ ಆಗುತ್ತದೆಯೇ ಎಂದು ಪ್ರಶ್ನಿಸಿದ ಅವರು ದೇಶಕ್ಕೆ ದೇಶವೇ ಆರ್‌ಎಸ್‌ಎಸ್ ಸಂಘಟನೆಯನ್ನು ಮೆಚ್ಚಿರುವಾಗ ಯಾರೋ ಕೆಲವರು ಅದಕ್ಕೆ ವಿರೋಧ ತೋರುವುದು ಸಾಮಾನ್ಯ .ಇದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ

Loading...