ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಿಪಟೂರು ವಿದ್ಯಾರ್ಥಿಗಳ ಸಾಧನೆ
Tiptur News: ತಿಪಟೂರು ತಾಲೂಕಿನ ಶ್ರೀ ವಿದ್ಯಾಪೀಠ ಎಸ್ವಿಪಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರಮಾಣಪತ್ರ, ಪದಕ ಹಾಗೂ ಕಪ್ಗಳನ್ನು ನೀಡಿ ಗೌರವಿಸಿ ಅಭಿನಂದಿಸಲಾಯಿತು.