ಕನ್ನಡಿಗರಂತಹ ಒಳ್ಳೆಯ ಜನರನ್ನು ಎಲ್ಲಿಯೂ ನೋಡಲಿಲ್ಲ: ಶ್ರೀ ಮಧುಸೂದನ ಸಾಯಿ
Sadguru Sri Madhusudan Sai: ನಮ್ಮ ಕೆಲಸ ಮಾತನಾಡಬೇಕೇ ಹೊರತು, ನಾವು ಮಾತನಾಡಬಾರದು ಎಂದು ಬಾಬಾ ಹೇಳಿಕೊಟ್ಟಿದ್ದರು. ಅದರಂತೆ ನಾವು ಕೆಲಸ ಮಾಡುತ್ತಾ ಸಾಗುತ್ತಿದ್ದೇವೆ. ನಮ್ಮ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್ ಕೌಂಟರ್ಗಳು ಇಲ್ಲ. ದೇಶದಲ್ಲಿ ಅನ್ನ, ಅಕ್ಷರ ಮತ್ತು ಆರೋಗ್ಯ ಎಂದಿಗೂ ವಾಣಿಜ್ಯಕ್ಕೆ ಬಳಕೆಯಾಗಿರಲಿಲ್ಲ. ಆ ಕಾಲ ಮತ್ತೆ ಬರಬೇಕಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.