ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆ; ಸಂಚಾರ ಸ್ಥಗಿತ
ನಮ್ಮ ಮೆಟ್ರೊ ಹಳದಿ ಮಾರ್ಗದ ಹುಸ್ಕೂರು ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಸೋಮವಾರ ಸಂಜೆ ಯುವಕ ಹಳಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹ ಹೊರ ತೆಗೆಯಲು ಹರ ಸಾಹಸ ಪಡುತ್ತಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಸಿಟಿಯಿಂದ ಬೊಮ್ಮಸಂದ್ರ ಕಡೆಗೆ ಸಾಗುವ ಮೆಟ್ರೊ ರೈಲುಗಳು ಸ್ಥಗಿತಗೊಂಡಿವೆ. ಆರ್.ವಿ. ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮಾತ್ರ ಸಂಚಾರ ಮುಂದುವರಿದಿದೆ