ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Gold price today on 1st November 2025: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25 ರೂ. ಇಳಿಕೆ ಕಂಡು ಬಂದಿದ್ದು, 11,275 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 28 ರೂ. ಇಳಿಕೆಯಾಗಿ, 12,300 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 90,200 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,750 ಹಾಗೂ 100 ಗ್ರಾಂಗೆ 12,27,500 ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 98,400 ರೂ. ಆದರೆ, 10 ಗ್ರಾಂಗೆ ನೀವು 1,23,000 ರೂ. ಹಾಗೂ 100 ಗ್ರಾಂಗೆ 12,30,000 ರೂ. ಪಾವತಿಸಬೇಕಾಗುತ್ತದೆ.

Digital Arrest: ಡಿಜಿಟಲ್ ಅರೆಸ್ಟ್ ಪ್ರಕರಣ; ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಂಗಳೂರು ಪೊಲೀಸರ ಕಾರ್ಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಅ. 23ರಂದು ಬಿಜೈ ನಿವಾಸಿ 79ರ ಹರೆಯದ ಮಹಿಳೆಗೆ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ಮಹಿಳೆಯ ಮೇಲೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ ಎಂದು ಬಂಧನದ ಬೆದರಿಕೆಯೊಡ್ಡಿದ್ದ.

Kannada Rajyotsava: ಕುಂದಾ ನಗರಿಯಲ್ಲಿ ಕಳೆಗಟ್ಟಿದ ಕನ್ನಡ ರಾಜ್ಯೋತ್ಸವ; ಮಧ್ಯರಾತ್ರಿಯಿಂದಲೇ ಆಚರಣೆ ಶುರು

ಕುಂದಾ ನಗರಿಯಲ್ಲಿ ಕಳೆಗಟ್ಟಿದ ಕನ್ನಡ ರಾಜ್ಯೋತ್ಸವ

ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಕುಂದಾನಗರಿ ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಜನರು ಕನ್ನಡ ರಾಜ್ಯೋತ್ಸವನ್ನು ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ದೊಡ್ಡ ಕ್ರಾಂತಿ ಆಗುವುದು ನಿಶ್ಚಿತ. ಏನಾದರೂ‌ ಅನಾಹುತ‌ ಉಂಟಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Karnataka Rajyotsava: ಕನ್ನಡ ನಾಡು ನುಡಿಯ ಶ್ರೇಷ್ಠತೆ ಸಾರುವ ಚಿತ್ರ ಗೀತೆಗಳಿವು

ಕರ್ನಾಟಕ ರಾಜ್ಯೋತ್ಸವದ ಈ ದಿನ ಕೇಳಲೇಬೇಕಾದ ಹಾಡುಗಳಿವು

ಕರ್ನಾಟಕ ರಾಜ್ಯೋತ್ಸವ ಬಂತೆಂದೆರೆ ನಾಡಿನೆಲ್ಲೆಡೆ ಸಂಭ್ರಮದ ವಾತಾವರಣ. ಕನ್ನಡದ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಸಾರುವ ಅನೇಕ ವಿಚಾರಗಳು ರಾಜ್ಯೋತ್ಸವದಂದು ಆಗಾಗ ಚರ್ಚಿಸಲ್ಪಡುತ್ತದೆ. ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಿಂದ ಹಿಡಿದು ಸಾಂಸ್ಕೃತಿಕ ಕಾರ್ಯಕ್ರಮಗಳವರೆಗೂ ಕನ್ನಡ ತಾಯಿ ಭುವನೇಶ್ವರಿಯನ್ನು ಸ್ಮರಿಸಲಾಗುತ್ತದೆ. ಅದರಲ್ಲೂ ಕನ್ನಡದ ಬಗ್ಗೆ ನಮ್ಮ ನಾಡು ನುಡಿಯನ್ನು ಜಗತ್ಪಸಿದ್ಧವಾಗಿಸುವ ಅನೇಕ ಸಿನಿಮಾ ಹಾಡುಗಳಿವೆ. ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಎಲ್ಲೆಡೆ ಆಗಾಗ ಮನನ ಮಾಡುವ ಕನ್ನಡ ಸೂಪರ್ ಹಿಟ್ ರಾಜ್ಯೋತ್ಸವ ಹಾಡುಗಳಿವೆ‌. ಆ ಹಾಡುಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Namma Metro: ಕನ್ನಡ ರಾಜ್ಯೋತ್ಸವಕ್ಕೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ಹಳದಿ ಮಾರ್ಗದಲ್ಲಿ ಇನ್ಮುಂದೆ ಪ್ರತಿ 15 ನಿಮಿಷಕ್ಕೊಂದು ರೈಲು

ಕನ್ನಡ ರಾಜ್ಯೋತ್ಸವಕ್ಕೆ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್‌ ಗುಡ್‌ ನ್ಯೂಸ್‌ ನೀಡಿದೆ. ನವೆಂಬರ್.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ ಎಂದು ಬಿಎಮ್‌ಆರ್‌ಸಿಎಲ್‌ ತಿಳಿಸಿದೆ. ಸದ್ಯ 4 ರೈಲುಗಳು ಸಂಚಾರ ನಡೆಸುತ್ತಿದ್ದು, 19 ನಿಮಿಷ ಅಂತರದಲ್ಲಿ ರೈಲು ಸೇವೆ ಲಭ್ಯವಿತ್ತು. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪ್ರಯಾಣ ಅನುಕೂಲಕರವಾಗಲಿದೆ. ಸಾವಿರಾರು ಜನರಿಗೆ ಅನುಕೂಲವಾಗಿರುವ ಹಳದಿ ಮೆಟ್ರೋ ಮಾರ್ಗದ ವಿಸ್ತರಣೆಗೆ ಸರ್ಕಾರ ಚಿಂತನೆ ನಡೆಸಿದೆ.

Jnanpith Award: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಅಗ್ರಗಣ್ಯ ಸಾಹಿತಿಗಳಿವರು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡದ ಸಾಹಿತಿಗಳು

ಜ್ಞಾನಪೀಠ ಪ್ರಶಸ್ತಿಯು ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ. ಬಹುತೇಕ ಮಂದಿ ಇದನ್ನು ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ಗೌರವ ಎಂದು ಭಾವಿಸಿದ್ದಾರೆ. ಆದರೆ ಇದನ್ನು ಸಾಹು ಜೈನ್ ಪರಿವಾರದವರು ನೀಡುತ್ತಾರೆ., ಈ ಪ್ರಶಸ್ತಿಯನ್ನು 1961ರ ಮೇ 22ರಂದು ಸ್ಥಾಪಿಸಲಾಯಿತು. ಭಾರತೀಯ ಜ್ಞಾನಪೀಠ ಟ್ರಸ್ಟ್ ಎಂಬ ಸಂಸ್ಥೆ ಈ ಪ್ರಶಸ್ತಿಯನ್ನು ಘೋಷಿಸುತ್ತದೆ. ಈವರೆಗೆ ಹಿಂದಿಯ ಸಾಹಿತಿಗಳು 11 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದು ಅಗ್ರ ಸ್ಥಾನದಲ್ಲಿದ್ದರೆ, 8 ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡವು ಎರಡನೇ ಸ್ಥಾನದಲ್ಲಿದೆ.

Kannada Rajyotsava 2025:ಕರ್ನಾಟಕಕ್ಕೆ ಪ್ರತ್ಯೇಕ ಬಾವುಟ ಹುಟ್ಟಿಕೊಳ್ಳಲು ಕಾರಣವೇನು?ಇಲ್ಲಿದೆ ಸಂಪೂರ್ಣ ಮಾಹಿತಿ

ಕನ್ನಡದ ಬಾವುಟ ಹುಟ್ಟಿಕೊಂಡದ್ದು ಯಾವಾಗ ಗೊತ್ತಾ?

Kannada Rajyotsava 2025: ಪ್ರತಿ ವರ್ಷದಂತೆ ಈ ವರ್ಷವು ಕೂಡ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ಈ ದಿನ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು ಜನರು ಕನ್ನಡಾಂಬೆಯ ವಿವಿಧ ಘೋಷ ವಾಕ್ಯ ಕೂಗಿ, ಕನ್ನಡದ ಭಾವುಟದ ಧ್ವಜ ಹಾರಿಸಿ, ವಾಹನಗಳ ಮೇಲೂ ಧ್ಚಜವನ್ನಿಟ್ಟು ದಿನವಿಡಿ ಕನ್ನಡದ ಆರಾಧನೆ ಮಾಡಿ ಕೊಳ್ಳುತ್ತಿರುತ್ತಾರೆ. ಆದರೆ ಬಹುತೇಕರಿಗೆ ರಾಜ್ಯೋತ್ಸವ ಆಚರಿಸುವ ಮೊದಲು ನಮ್ಮ ರಾಜ್ಯದ ಹೆಸರು ಏನಾಗಿತ್ತು? ನಮ್ಮ ನಾಡಿನ ಧ್ವಜ ಏನನ್ನು ಸಂಕೇತಿಸುತ್ತದೆ ಇತರೆ ವಿಚಾರಗಳೆ ತಿಳಿದಿರಲಾರದು. ಈ ನಾಡಿನಲ್ಲಿ ಹುಟ್ಟಿ ಬದುಕು ಕಟ್ಟಿಕೊಳ್ಳುವವರಿಗೆ ನಮ್ಮ ರಾಜ್ಯ ಭಾವುಟದ ಹಿನ್ನೆಲೆ ತಿಳಿದುಕೊಳ್ಳುವುದು ಕೂಡ ಅನಿವಾರ್ಯ.

Sharavathi Pump Storage: ಉತ್ತರ ಕನ್ನಡಕ್ಕೆ ಮಾರಕವಾಗಿರುವ  ನದಿ ತಿರುವು ಯೋಜನೆಗಳನ್ನು ಕೈಬಿಡಿ; ಸಿಎಂ ಸಿದ್ದರಾಮಯ್ಯಗೆ ಮನವಿ

ನದಿ ತಿರುವು ಯೋಜನೆಗಳನ್ನು ಕೈಬಿಡಿ; ಸಿಎಂ ಸಿದ್ದರಾಮಯ್ಯಗೆ ಮನವಿ

ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ನೀಡಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಉಪಸ್ಥಿತರಿದ್ದರು. ಸ್ವರ್ಣವಲ್ಲೀ ಸ್ವಾಮೀಜಿಯವರ ನೇತೃತ್ವದಲ್ಲಿ ಜನಾಂದೋಲನ ನಡೆಯುತ್ತಿದೆ ಎಂಬ ಸಂಗತಿಯನ್ನು ವಿ.ಎನ್‌. ಹೆಗಡೆ ಬೊಮ್ಮನಳ್ಳಿ ಮುಖ್ಯಮಂತ್ರಿ ಗಮನಕ್ಕೆ ತಂದರು.

Karnataka Weather: ಹವಾಮಾನ ವರದಿ; ಇಂದು ಕೂಡ ರಾಜ್ಯದಲ್ಲಿ ಮುಂದುವರಿಯಲಿದೆ ಒಣ ಹವೆ

ಹವಾಮಾನ ವರದಿ; ಇಂದು ಕೂಡ ರಾಜ್ಯದಲ್ಲಿ ಮುಂದುವರಿಯಲಿದೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ: ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29°C ಮತ್ತು 18°C ಇರುವ ಸಾಧ್ಯತೆ ಇದೆ. ನ.6ರವರೆಗಿನ ರಾಜ್ಯದ ಹವಾಮಾನ ವರದಿ ಕುರಿತ ಮಾಹಿತಿ ಇಲ್ಲಿದೆ.

Karnataka Rajyotsava 2025: ರಾಜ್ಯದಲ್ಲಿಂದು 70ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ; ಆಚರಣೆ ಹೇಗಿರಲಿದೆ?

ರಾಜ್ಯದಲ್ಲಿಂದು 69ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ

ರಾಜ್ಯ, ದೇಶ, ಹೊರನಾಡಿನ ಕನ್ನಡಿಗರೆಲ್ಲರ ಮನದಲ್ಲಿ ಈಗ ಕವಿ ಕೆ.ಎಸ್. ನಿಸಾರ್ ಅಹಮದ್ ಬರೆದಿರುವ ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ... ಹಾಡು ಗುನುಗುತ್ತಿದೆ. ಯಾಕೇಂದರೆ ರಾಜ್ಯೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ, ದೇಶದ ಗಾಡಿಯನ್ನು ಮೀರಿ ತಿಂಗಳು ಪೂರ್ತಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯುವ ಈ ಹಬ್ಬದ ಮಹತ್ವ, ಹಿನ್ನೆಲೆ ಏನು ಗೊತ್ತೇ? ಕರ್ನಾಟಕ ರಾಜ್ಯದ ಏಕೀಕರಣದ ಚಿಂತನೆ ಹುಟ್ಟಿದ್ದು ಯಾವಾಗ, ಯಾರು ಇದಕ್ಕೆ ಕಾರಣ, ಯಾರೆಲ್ಲ ಇದರಲ್ಲಿ ಪಾಲ್ಗೊಂಡಿದ್ದರು, ನಾಡೋತ್ಸವವನ್ನು ಯಾವ ರೀತಿಯಲ್ಲಿ ಆಚರಿಸಲಾಗುತ್ತದೆ ಎನ್ನುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

Kudachi MLA Mahendra Tammannavar: ಪುತ್ರನಿಗೆ ಡಿಸಿಎಂ ಹೆಸರಿಟ್ಟ ಕುಡಚಿ ಶಾಸಕ; ಡಿಕೆಶಿಯಿಂದಲೇ ನಾಮಕರಣ!

ಪುತ್ರನಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಹೆಸರಿಟ್ಟ ಕುಡಚಿ ಶಾಸಕ!

DK Shivakumar: ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ ʼಶಿವಕುಮಾರ್ʼ ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ. ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾರೈಸಿದ್ದಾರೆ.

ಸ್ಟ್ರೋಕ್ ಪೆ ರೋಕ್ - ವೇಗವಾಗಿ ಗುರುತಿಸಿ, ವೇಗವಾಗಿ ಕಾರ್ಯನಿರ್ವಹಿಸಿ

ಸ್ಟ್ರೋಕ್ ಪೆ ರೋಕ್ - ವೇಗವಾಗಿ ಗುರುತಿಸಿ, ವೇಗವಾಗಿ ಕಾರ್ಯನಿರ್ವಹಿಸಿ

ಈ ಸರಳ ಪರೀಕ್ಷೆಯು ಕೇವಲ ಒಂದು ತ್ವರಿತ ತಪಾಸಣೆಯಲ್ಲ - ಇದು ಸಮಯದ ವಿರುದ್ಧದ ಓಟ. ಪಾಶ್ರ್ವವಾಯು ವೇಗವಾಗಿ ಗುರುತಿಸಲ್ಪಟ್ಟಷ್ಟೂ, ರೋಗಿ ಸುಧಾರಿತ ಆರೈಕೆಯನ್ನು ಪಡೆಯ ಬಹುದು. ಮತ್ತು ಅಲ್ಲಿಯೇ ಯಾಂತ್ರಿಕ ಥ್ರಂಬೆಕ್ಟಮಿ ಬರುತ್ತದೆ. ಈ ಗಮನಾರ್ಹ ವಿಧಾನವು ಮೆದುಳಿಗೆ ರಕ್ತದ ಹರಿವನ್ನು ತಡೆಯುವ ಹೆಪ್ಪುಗಟ್ಟುವಿಕೆಯನ್ನು ಭೌತಿಕವಾಗಿ ತೆಗೆದುಹಾಕುತ್ತದೆ.

Plastic Water Bottle Ban: ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ ನೀರು ಬ್ಯಾನ್‌; 'ನಂದಿನಿ' ತಿನಿಸು ಕಡ್ಡಾಯ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ ನೀರು ಬ್ಯಾನ್‌

Plastic Water Bottle Ban: ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ 'ನಂದಿನಿ' ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ. ಹಾಗಯೇ ಪ್ಲಾಸ್ಟಿಕ್‌ ಬಾಟಲ್‌ ನೀರು ಬಳಕೆಯನ್ನು ನಿಷೇಧಿಸಲಾಗಿದೆ.

KEA Recruitment 2025: ವಿವಿಧ ಇಲಾಖೆಗಳ 708 ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆ ಅವಧಿ ನ.14ರವರೆಗೆ ವಿಸ್ತರಣೆ

708 ಹುದ್ದೆ ನೇಮಕಾತಿ; ಅರ್ಜಿ ಸಲ್ಲಿಕೆ ಅವಧಿ ನ.14ರವರೆಗೆ ವಿಸ್ತರಿಸಿದ ಕೆಇಎ

Job News: ವಿವಿಧ ಇಲಾಖೆಗಳಲ್ಲಿನ 708 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.31 ನಿಗದಿಯಾಗಿತ್ತು. ಆದರೆ, ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇದೀಗ ಮತ್ತೆ 14 ದಿನ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

KSSIDC Recruitment 2025: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 44 ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ 44 ಹುದ್ದೆಗೆ ಅರ್ಜಿ ಆಹ್ವಾನ

KEA Recruitment 2025: ಕಲ್ಯಾಣ ಕರ್ನಾಟಕ ವೃಂದದ 11 ಹುದ್ದೆ ಮತ್ತು ಉಳಿಕೆ ಮೂಲ ವೃಂದದ 33 ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 1ರಿಂದ 14ರವರೆಗೆ ದಿನಾಂಕ ನಿಗದಿಯಾಗಿದ್ದು, ನ.15ರ ಸಂಜೆ 4ರೊಳಗೆ ಶುಲ್ಕ ಪಾವತಿಸಬೇಕು.

Karnataka Weather: ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ಆಕಾಶ, ರಾಜ್ಯದ ಉಳಿದೆಡೆ ಒಣ ಹವೆ

ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನ.1ರಂದು ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ನ.2ರಂದು ಕೂಡ ಇದೇ ರೀತಿಯ ವಾತಾವರಣ (Karnataka Weather forecast) ಮುಂದುವರಿಯಲಿದೆ.

KMC Hospital Mangaluru: ಹಲವು ತೊಡಕುಗಳ ನಡುವೆಯೂ ಗಾಯಿಟರ್ ಗಡ್ಡೆ ಯಶಸ್ವಿಯಾಗಿ ಹೊರತೆಗೆದ ಕೆಎಂಸಿ ವೈದ್ಯರ ತಂಡ

ಗಾಯಿಟರ್ ಗಡ್ಡೆ ಯಶಸ್ವಿಯಾಗಿ ಹೊರತೆಗೆದ ಕೆಎಂಸಿ ವೈದ್ಯರ ತಂಡ

ದೀರ್ಘಕಾಲದಿಂದ ಬಹುಗಂಟುಗಳ ಗಾಯಿಟರ್ (ಥೈರಾಯ್ಡ್‌ ಗಡ್ಡೆ) ಸಮಸ್ಯೆಯಿಂದ ಬಳಲುತ್ತಿದ್ದ 72 ವರ್ಷದ ವೃದ್ಧನಿಗೆ ಹಲವು ಆರೋಗ್ಯ ತೊಡಕುಗಳ ನಡುವೆಯೂ ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಿಟರ್ ಗಡ್ಡೆಯು 18x12 ಸೆ.ಮೀಟರ್ ದೊಡ್ಡದಾಗಿತ್ತು. ರೋಗಿಯ ವಯಸ್ಸು, ವಿವಿಧ ಆರೋಗ್ಯ ಸಮಸ್ಯೆ ಮತ್ತು ಶಸ್ತ್ರಚಿಕಿತ್ಸೆಯ ಅಪಾಯಗಳ ನಡುವೆಯೂ ಈ ಕ್ಲಿಷ್ಟವಾದ ಶಸ್ತ್ರಚಿಕಿತ್ಸೆಯನ್ನ ವಿವಿಧ ತಜ್ಞರ ತಂಡವು ಯಶಸ್ವಿಗೊಳಿಸಿದೆ.

Actor Darshan: ಸೀಕ್ರೆಟ್‌ ಆಗಿ ಮದುವೆ ಆಗಿದ್ರಾ ನಟ ದರ್ಶನ್‌; ಪವಿತ್ರಾ ಗೌಡ ಜತೆಗಿನ ಹಳೆಯ ಫೋಟೊಗಳು ವೈರಲ್‌!

ದರ್ಶನ್‌-ಪವಿತ್ರಾ ಗೌಡ ಫೋಟೊಗಳು ವೈರಲ್‌; ಸೀಕ್ರೆಟ್‌ ಆಗಿ ಮದುವೆ ಆಗಿದ್ರಾ!

Sandalwood News: ದರ್ಶನ್ ಹಾಗೂ ಪವಿತ್ರಾ ಗೌಡ ಮದುವೆಯದ್ದು ಎಂಬುವುದನ್ನು ಬಿಂಬಿಸಲು ಲೀಕ್ ಮಾಡಿರುವ ಫೋಟೊಗಳಂತೆ ಇವು ಕಾಣುತ್ತಿದೆ. ಇದರಿಂದ ನಟ ದರ್ಶನ್‌ ಮತ್ತು ಪವಿತ್ರಾ ಗೌಡಗೆ ರಹಸ್ಯವಾಗಿ ಮದುವೆಯಾಗಿತ್ತಾ? ಎಂಬ ಚರ್ಚೆ ಶುರುವಾಗಿದೆ. ಇದಕ್ಕೆ ಕಾರಣ ಪವಿತ್ರಾ ಕೊರಳಲ್ಲಿರುವ ಅರಿಶಿನ ದಾರವಾಗಿದೆ.

CM Siddaramaiah: ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ: ಸಿಎಂ

CM Siddaramaiah slams BJP: ಬಿಜೆಪಿಯವರು ನೆಹರೂ ಅವರನ್ನು ಟೀಕಿಸುತ್ತಾರೆ. ಆದರೆ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ನೆಹರೂ, ವಲ್ಲಭಭಾಯಿ ಪಟೇಲ್, ಸುಭಾಷ್‌ ಚಂದ್ರ ಬೋಸ್ ಸೇರಿದಂತೆ ಅನೇಕರು ಹೋರಾಡಿದರು. ಇಂದು ದೇಶ ಸ್ವತಂತ್ರವಾಗಿದ್ದರೆ ಅದು ಅವರ ಹೋರಾಟದ ಫಲ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ. ಸಾವರ್ಕರ್, ಗೋಲ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದನ್ನು ಬಿಜೆಪಿಯವರ ಢೋಂಗಿತನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

National Unity Day 2025: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆ

ಶಿಕಾರಿಪುರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆ

Shikaripura News: ಬೆಜೆಪಿ ವತಿಯಿಂದ ಶುಕ್ರವಾರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ “ಒಂದೇ ಭಾರತ - ಆತ್ಮನಿರ್ಭರ ಭಾರತ” ಘೋಷವಾಕ್ಯದ ಅಡಿಯಲ್ಲಿ ದೇಶಾದ್ಯಂತ ನಡೆಯುತ್ತಿರುವ ಏಕತಾ ನಡಿಗೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಶಿಕಾರಿಪುರದ ಬಸವೇಶ್ವರ ಪಾರ್ಕ್‌ನ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

Rotary Karnataka Rajyotsava 2025: ಮಲ್ಲೇಶ್ವರದಲ್ಲಿ ನ.1ರಂದು ರೋಟರಿ ಕರ್ನಾಟಕ ರಾಜ್ಯೋತ್ಸವ 2025; ಆಪತ್ಬಾಂಧವ ಪ್ರಶಸ್ತಿ ಪ್ರದಾನ

ಮಲ್ಲೇಶ್ವರದಲ್ಲಿ ನ.1ರಂದು ರೋಟರಿ ಕರ್ನಾಟಕ ರಾಜ್ಯೋತ್ಸವ 2025

Rotary Karnataka Rajyotsava 2025: ಬೆಂಗಳೂರಿನ ಮಲ್ಲೇಶ್ವರದಲ್ಲಿ ನ.1ರಂದು ನಡೆಯಲಿರುವ ರೋಟರಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಛಾಯಾಚಿತ್ರ ಪ್ರದರ್ಶನ, ಗಾಯಕ ಮನೋಜವಂ ಆತ್ರೇಯ, ಗಾಯಕಿ ಪೃಥ್ವಿ ಭಟ್ ಅವರಿಂದ ಗೀತ ಸಂಭ್ರಮ, ಪ್ರಸಿದ್ಧ ಪ್ರಭಾತ್‌ ಇಂಟರ್‌ನ್ಯಾಷನಲ್‌ನ ಕಲಾವಿದರಾದ ಶರತ್, ಭರತ್ ವೃಂದದಿದ ನೃತ್ಯ ನಾಟಕ ಪ್ರದರ್ಶನ ನಡೆಯಲಿದೆ.

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಗ್ಯಾಂಗ್ ವಿರುದ್ಧ ನ.3ಕ್ಕೆ ದೋಷಾರೋಪ ನಿಗದಿ

ನಟ ದರ್ಶನ್‌ ಸೇರಿ ಇತರ ಆರೋಪಿಗಳ ವಿರುದ್ಧ ನ.3ಕ್ಕೆ ದೋಷಾರೋಪ ನಿಗದಿ

Renukaswamy Case: ನವೆಂಬರ್ 3 ರಂದು ದರ್ಶನ್ ಹಾಗೂ ಇತರೆ ಆರೋಪಿಗಳ ಪಾಲಿಗೆ ಅತ್ಯಂತ ಮಹತ್ವದ ದಿನ ಆಗಿರಲಿದೆ. ಅಂದು ನಿಗದಿ ಆಗುವ ಆರೋಪಗಳ ಮೇಲೆಯೇ ಮುಂದಿನ ವಿಚಾರಣೆ ನಡೆಯಲಿದೆ. ಪೊಲೀಸರು ಅಥವಾ ತನಿಖಾಧಿಕಾರಿಗಳು ಈ ದೋಷಾರೋಪವನ್ನು ನಿಗದಿ ಮಾಡಲಿದ್ದಾರೆ.

Jemimah Rodrigues ವಿಶ್ವಕಪ್‌ ಸೆಮಿಯಲ್ಲಿ ಭಾರತ ಗೆಲುವಿಗೆ ಕಾರಣವಾದ ಜೆಮಿಮಾ ಮಂಗಳೂರು ಮೂಲದ ಹುಡುಗಿ!

ಸೆಮಿ ಪಂದ್ಯದಲ್ಲಿ ಮಿಂಚಿದ ಮಂಗಳೂರು ಮೂಲದ ಜೆಮಿಮಾ ರಾಡ್ರಿಗಸ್‌

ಜೆಮಿಮಾ ರಾಡ್ರಿಗಸ್‌ ಅವರಿಗೆ ಇದು ಚೊಚ್ಚಲ ವಿಶ್ವಕಪ್‌ ಟೂರ್ನಿಯಾಗಿದೆ. ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಬೀಸಿದ ಜೆಮಿಮಾ ಕ್ರೀಸ್‌ನಲ್ಲಿ ಬೇರೂರಿ ನಿಂತು ಆಸೀಸ್‌ ಬೌಲರ್‌ಗಳನ್ನು ಬೆಂಡೆತ್ತಿದರು. ತಂಡದ ಗೆಲುವಿಗೆ ಟೊಂಕ ಕಟ್ಟಿ ನಿಂತ ಅವರು ಶತಕ ಬಾರಿಸಿದರೂ ಸಂಭ್ರಮಿಸಲಿಲ್ಲ. ತಂಡವನ್ನು ಗೆಲುವಿನ ದಡ ಸೇರಿಸುವುದೇ ಅವರ ಪ್ರಧಾನ ಲಕ್ಷ್ಯವಾಗಿತ್ತು. ತಂಡ ಗೆಲ್ಲುತ್ತಿದ್ದಂತೆ ಭಾವುಕರಾದ ಜೆಮಿಮಾ ಮೈದಾನದಲ್ಲೇ ಸಂತಸದಿಂದ ಕಣ್ಣೀರು ಸುರಿಸಿದರು.

Self Harming: ಅರ್ಚಕರ ಕುಟುಂಬ ಸಾಮೂಹಿಕ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇನ್ನಿಬ್ಬರು ಗಂಭೀರ

ಅರ್ಚಕರ ಕುಟುಂಬ ಸಾಮೂಹಿಕ ಆತ್ಮಹತ್ಯೆ ಯತ್ನ, ಇಬ್ಬರ ಸಾವು, ಇಬ್ಬರು ಗಂಭೀರ

Devanahalli: 60 ವರ್ಷ ವಯಸ್ಸಿನ ಕುಮಾರಪ್ಪ, ಇವರ ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಹಿರಿಯ ಮಗ ಕ್ರೀಮಿನಾಶಕ ಸೇವಿಸಿ ನಂತರ ನೇಣಿಗೆ ಶರಣಾಗಿದ್ದಾನೆ. ತಂದೆ ಕುಮಾರಪ್ಪ ಹಾಗೂ ಹಿರಿಯ ಮಗ ಅರುಣ್ ಸಾವನ್ನಪ್ಪಿದ್ದು, ಅರಚಾಡುತ್ತಾ ವಿಲವಿಲ ಒದ್ದಾಡುತ್ತಿದ್ದ ತಾಯಿ ರಮಾ ಹಾಗೂ ಕಿರಿಯ ಮಗನನ್ನು ಸ್ಥಳೀಯರು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದೆ.

Loading...