ದಬ್ಬಾಳಿಕೆ ನಿಲ್ಲಿಸದಿದ್ರೆ ಪೊಲೀಸ್ ಠಾಣೆಗಳಿಗೆ ಮುತ್ತಿಗೆ: ಎಚ್ಡಿಕೆ
HD Kumaraswamy: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಅವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸುವುದನ್ನು ನಿಲ್ಲಿಸಬೇಕು. ಪೊಲೀಸ್ ಇಲಾಖೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದು. ರಾಜ್ಯ ಸರ್ಕಾರ ಈ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಕೈಗೊಳ್ಳುವುದನ್ನು ಮುಂದುವರಿಸಿದರೆ ನಾವು ಕೈಕಟ್ಟಿ ಕೂರಲು ಸಾಧ್ಯವಿಲ್ಲ. ಅದರ ವಿರುದ್ಧ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕುವ ಚಳವಳಿ ಶುರು ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.