ಉತ್ತರಾಧಿಕಾರಿ ನೇಮಿಸುವ ಹಕ್ಕು ದಲೈಲಾಮಾರಿಗೆ ಮಾತ್ರ ಇದೆ: ಕಿರಣ್ ರಿಜಿಜು
Dalai Lamaʼs 90th birth anniversary: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ಕಾಲನಿಯಲ್ಲಿ 14ನೇ ದಲೈಲಾಮಾ ಅವರ 90ನೇ ಜನ್ಮದಿನಾಚರಣೆ ನಡೆದಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ್ ಸೇರಿ ಹಲವರು ಗಣ್ಯರು ಭೇಟಿ ನೀಡಿ ದಲೈಲಾಮಾ ಅವರ ಆಶೀರ್ವಾದ ಪಡೆದಿದ್ದಾರೆ.