ಅತೀ ಹೆಚ್ಚು ಭಾಷೆಗಳಿಗೆ ಅನುವಾದಗೊಂಡ ಭೈರಪ್ಪ ಕೃತಿಗಳಿವು
ಕನ್ನಡ ಸಾಹಿತ್ಯ ಲೋಕಕ್ಕೆ, ಕಾದಂಬರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಹಿರಿಯ ಸಾಹಿತಿ ಎಸ್.ಎಸ್. ಭೈರಪ್ಪ ಇನ್ನಿಲ್ಲ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸೆಪ್ಟೆಂಬರ್ 24ರಂದು ಬೆಂಗಳೂರಿನಲ್ಲಿ ನಿಧನ ಹೊಂದಿದರು. ತಮ್ಮ ವಿಶಿಷ್ಟ ಕೃತಿಗಳ ಮೂಲಕ ಸಾಹಿತ್ಯ ಪ್ರೇಮಿಗಳಗಳ ಗಮನ ಸೆಳೆದ ಅವರ ಹಲವು ಕಾದಂಬರಿಗಳು ಭಾರತದ ವಿವಿಧ ಭಾಷೆಗಳು ಮಾತ್ರವಲ್ಲ ಇಂಗ್ಲಿಷ್‌ಗೂ ಅನುವಾದಗೊಂಡಿವೆ. ಇಲ್ಲಿದೆ ಅತಿ ಹೆಚ್ಚು ಭಾಷೆಗಳಿಗೆ ಅನುವಾದಗೊಂಡ ಭೈರಪ್ಪ ಅವರ ಕೃತಿಗಳ ವಿವರ.