ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಿಂಗ್ ಮಾರ್ಕ್ಸ್ ಕಡಿತ ಬೇಡ
Basavaraj Horatti: ಇತ್ತೀಚೆಗೆ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಅವರನ್ನು ಉತ್ತೀರ್ಣ ಗೊಳಿಸುತ್ತೇವೆ ಎಂದು ಹೇಳಿಕೆ ನೀಡಿರುತ್ತೀರಿ, ಇದು ಬಹಳ ಖೇದಕರ ಸಂಗತಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.