ಪಾಕ್ ಪರ ಬೇಹುಗಾರಿಕೆ, ಉಡುಪಿಯಲ್ಲಿ ಮೂರನೇ ವ್ಯಕ್ತಿ ಬಂಧನ
ಎರಡು ವಾರಗಳ ಹಿಂದೆ ಮಲ್ಪೆಯ ಕೊಚ್ಚಿನ್ ಶಿಪ್ಯಾರ್ಡ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರು ಇಲ್ಲಿಗೆ ದುರಸ್ತಿಗೆ ಬರುತ್ತಿದ್ದ ಭಾರತೀಯ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್ ಮತ್ತಿತರ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಇದೀಗ ಅವರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಇನ್ನೊಬ್ಬ ಆರೋಪಿಯನ್ನು (Spying case) ಪೊಲೀಸರು ಭಾನುವಾರ ಬಂಧಿಸಿದ್ದಾರೆ.