ನ್ಯಾ. ಸಂತೋಷ್ ಗಜಾನನ ಭಟ್ ಸೇರಿ ರಾಜ್ಯದ 114 ಜಡ್ಜ್‌ಗಳ ವರ್ಗಾವಣೆ
ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ಜಡ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರನ್ನು ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ನಡೆಸಿದ್ದ ಸಂತೋಷ್ ಗಜಾನನ ಭಟ್ ಅವರು ನೆನ್ನೆ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳನ್ನು ದೋಷಿಗಳು ಎಂದು ತೀರ್ಪು ನೀಡಿದ್ದರು. ಇದರ ಬೆನ್ನಲ್ಲೇ ಈ ನ್ಯಾಯಾಧೀಶರ ವರ್ಗಾವಣೆಯಾಗಿದೆ.