ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಯಾಗಲಿ
ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ೨೦೨೪ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು ಶೇ ೨೧ ರಷ್ಟಿದೆ. ೨೦೨೫ರಲ್ಲಿ ಈ ಸಂಖ್ಯೆ ೧.೨ ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ.