ಅಬಕಾರಿ ಅಧಿಕಾರಿಗಳೇ ಅಕ್ರಮ ಮದ್ಯ ಮಾರಾಟದ ರೂವಾರಿಗಳು: ಸಿ.ಬಿ. ಸುರೇಶ್ಬಾಬು
Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಿ.ಬಿ. ಸುರೇಶ್ಬಾಬು, ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿದ್ದಾರೆ.