ಚಿಂತಾಮಣಿ-ಬೆಂಗಳೂರು ರಸ್ತೆಯಲ್ಲಿ ಭೀಕರ ಅಪಘಾತ
ಚಿಂತಾಮಣಿಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಿನ್ನಸಂದ್ರ ಗ್ರಾಮದ ಹೋಟೆಲ್ ಒಂದರ ಬಳಿ ತಲುಪಿದಾಗ ಜೋರು ಮಳೆ ಸುರಿಯುತ್ತಿತ್ತು. ಮಳೆಯ ಪರಿಣಾಮ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಚಾಲಕನಿಗೆ ಸ್ಪಷ್ಟವಾಗಿ ಕಾಣಿಸದೆ ಇದ್ದುದ್ದರಿಂದ, ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಡಿವೈಡರ್‌ಗೆ ರಭಸವಾಗಿ ಡಿಕ್ಕಿಯಾಗಿದೆ. ಡಿಕ್ಕಿಯ ಭೀಕರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.