ವಾಲ್ಮೀಕಿ ನಿಗಮ ಹಗರಣದ ತನಿಖೆ ಸಿಬಿಐಗೆ ವಹಿಸಿ ಹೈಕೋರ್ಟ್ ಆದೇಶ
Valmiki Corporation scam: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಕೋರ್ಟ್, ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಸೂಚಿಸಿದೆ.