2026ರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಫೆ 15ಕ್ಕೆ ಭಾರತ-ಪಾಕ್ ಪಂದ್ಯ!
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮಂಗಳವಾರ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಲೀಗ್ ಹಂತದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಹಾಗಾಗಿ ಈ ಎರಡೂ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿ ಕಾದಾಟ ನಡೆಸಲಿವೆ.