ಚಿರತೆ ದಾಳಿ ಭೀತಿ; ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆ ನಿಷೇಧ
Male Mahadeshwara Hill: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಪ್ರವೀಣ್ ಎಂಬುವವರು ಇತ್ತೀಚೆಗೆ ಬಲಿಯಾಗಿದ್ದರು. ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಬೆಟ್ಟಕ್ಕೆ ತೆರಳುವ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ.