ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ಸಾಂಪ್ರದಾಯಿಕ ಕೃಷಿಯನ್ನು ಉತ್ತೇಜಿಸುವ ಪ್ರಯತ್ನ: *‘ಸ್ಕೊಡ್‌ವೆಸ್ ನಾಟಿ ಹಬ್ಬ ನೆಲಮೂಲ ಸಂಸ್ಕೃತಿಯ ಪ್ರತೀಕವಾಗಿದ್ದು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸುವ, ಸಂರಕ್ಷಿಸುವ ಪ್ರಯತ್ನವಾಗಿದ್ದು, ಡಿವೈಎಸ್ ಪಿ ಗೀತಾ ಪಾಟೀಲ್ ಗದ್ದೆಗೆ ಇಳಿದು ಸಂಘ ಸಂಸ್ಥೆ, ಇಲಾಖೆ ಅಧಿಕಾರಿಗಳೊಂದಿಗೆ ಗದ್ದೆ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಎಸಿ ಕೆ.ಕಾವ್ಯಾ ರಾಣಿ ಸೇರಿದಂತೆ ಹಲವರಿದ್ದರು

Karnataka Rains: ನಾಳೆ ಮೈಸೂರು, ಮಂಡ್ಯ ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಮಳೆ ನಿರೀಕ್ಷೆ

ನಾಳೆ ಮೈಸೂರು, ಮಂಡ್ಯ ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Hikora Movie: ನೀನಾಸಂ ಕಿಟ್ಟಿ ನಿರ್ದೇಶಿಸಿ, ನಟಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಔಟ್‌

ನೀನಾಸಂ ಕಿಟ್ಟಿ ನಿರ್ದೇಶಿಸಿ, ನಟಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಔಟ್‌

Hikora Movie: ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ರಂಗಕರ್ಮಿ, ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿ ಟ್ರೇಲರ್ ಅನಾವರಣ ಮಾಡಿದ್ದಾರೆ.

Rishab shetty: ಐತಿಹಾಸಿಕ ಸಿನಿಮಾಕ್ಕೆ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಾಯಕ

ಐತಿಹಾಸಿಕ ಸಿನಿಮಾಕ್ಕೆ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಾಯಕ

Rishab Shetty: ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅಭಿನಯದ ಐತಿಹಾಸಿಕ ಆಕ್ಷನ್‌ ಡ್ರಾಮಾ ಹಿನ್ನೆಲೆಯ ನೂತನ ಸಿನಿಮಾದ ಅನೌನ್ಸ್‌ಮೆಂಟ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನೆಮಾಸ್ ಜಂಟಿಯಾಗಿ ಹೊಸ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದು, 18ನೇ ಶತಮಾನದ ಕಥೆ ಹೇಳಲು ಮುಂದಾಗಿದ್ದಾರೆ.

Loose Maada Movie: ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ʼಲೂಸ್ ಮಾದʼ ಚಿತ್ರಕ್ಕೆ ಚಾಲನೆ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ʼಲೂಸ್ ಮಾದʼ ಚಿತ್ರಕ್ಕೆ ಚಾಲನೆ

Loose Maada Movie: ನಟ ಯೋಗೇಶ್‌ ಅಭಿನಯದ, ರಂಜಿತ್ ಕುಮಾರ್ ಗೌಡ ನಿರ್ದೇಶಿಸುತ್ತಿರುವ ʼಲೂಸ್ ಮಾದʼ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಯೋಗೇಶ್ ಅವರ ತಂದೆ, ನಿರ್ಮಾಪಕ ಟಿ.ಪಿ. ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರದ ನಿರ್ಮಾಪಕ ಧರ್ಮೇಂದ್ರ ಅವರೆ ಕ್ಯಾಮೆರಾ ಚಾಲನೆ ಮಾಡಿದರು.

Just Married Movie: 'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಹಾಡು ರಿಲೀಸ್‌

'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಹಾಡು ರಿಲೀಸ್‌

Sandalwood Movie: ಅನನ್ಯಾ ಭಟ್ ಅವರ ಧ್ವನಿಯಲ್ಲಿ ಮೂಡಿಬಂದಿರುವ ಸಿನಿಮಾ 'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಎಂಬ ಸುಂದರ ಗೀತೆ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಧನಂಜಯ್ ರಂಜನ್ ಅವರು ಸಾಹಿತ್ಯ ಬರೆದಿದ್ದಾರೆ.

Prajwal Revanna Case: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು‌ ಕೋರ್ಟ್ ತೀರ್ಪು; ನಾಳೆ ಶಿಕ್ಷೆ ಪ್ರಕಟ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು‌ ಕೋರ್ಟ್ ತೀರ್ಪು

Physical abuse: ಅತ್ಯಾಚಾರ ಪ್ರಕರಣದಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿತ್ತು.

Dharmasthala Case: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದವರ ಮೇಲೆ ಕ್ರಮ: ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದವರ ಮೇಲೆ ಕ್ರಮ: ಪರಮೇಶ್ವರ್‌ ಎಚ್ಚರಿಕೆ

G Parameshwara: ಎಸ್​ಐಟಿ ತನಿಖಾ ತಂಡ ಮುಖ್ಯಸ್ಥರಾಗಿರುವ ಪ್ರಣಬ್ ಮೊಹಂತಿ ಇಂದು ಗೃಹ ಸಚಿವರನ್ನು ಭೇಟಿಯಾಗಿದ್ದು, ಈ ಭೇಟಿಯ ಬಳಿಕ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿದರು. ಮೊಹಂತಿ ಅವರು ಕೇಂದ್ರ ಸೇವೆಗೆ ನೇಮಕಗೊಂಡ ಮೊಹಂತಿ ಎಸ್‌ಐಟಿಯಿಂದ ಹೊರಬೀಳಲಿದ್ದಾರೆ ಎನ್ನಲಾಗಿತ್ತು. ಈ ಕುರಿತು ಪರಮೇಶ್ವರ್‌ ಸ್ಪಷ್ಟನೆಯನ್ನೂ ನೀಡಿದ್ದಾರೆ.

Nagamma Passes Away: ಪುನೀತ್‌ ಆಗಮನಕ್ಕೆ ಕಾದಿದ್ದ ಡಾ.ರಾಜ್‌ ಸಹೋದರಿ ನಾಗಮ್ಮ ಕೀರ್ತಿಶೇಷ

ಪುನೀತ್‌ ಆಗಮನಕ್ಕೆ ಕಾದಿದ್ದ ಡಾ.ರಾಜ್‌ ಸಹೋದರಿ ನಾಗಮ್ಮ ಕೀರ್ತಿಶೇಷ

Nagamma: ಗಾಜನೂರು ನಿವಾಸಿಯಾಗಿದ್ದ ನಾಗಮ್ಮ, ಪುನೀತ್‌ ರಾಜ್‌ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಅವರುಗಳಿಗೆ ಪ್ರೀತಿಯ ನಾಗತ್ತೆಯಾಗಿದ್ದರು. ವಯಸ್ಸಾಗಿದ್ದ ಕಾರಣ, ಅವರಿಗೆ ಆಘಾತ ಆಗಬಾರದೆಂದು ಪುನೀತ್ ರಾಜ್​ಕುಮಾರ್ ನಿಧನದ ಸುದ್ದಿಯನ್ನು ಅವರಿಗೆ ಕುಟುಂಬದವರು ತಿಳಿಸಿರಲಿಲ್ಲ.

Rahul Gandhi: ಬಿಜೆಪಿ ಮತ ಕಳ್ಳತನ ಆರೋಪಿಸಿ ಆ.5ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ, ಕಾಂಗ್ರೆಸ್‌ ಪ್ರತಿಭಟನೆ

ಬಿಜೆಪಿ ಮತ ಕಳ್ಳತನ ಆರೋಪಿಸಿ ಆ.5ರಂದು ರಾಹುಲ್‌ ಗಾಂಧಿ ಪಾದಯಾತ್ರೆ

ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom park) ಕಾಂಗ್ರೆಸ್ ಪ್ರತಿಭಟನೆ ನಡೆಯಲಿದ್ದು, ಮೌರ್ಯ ಸರ್ಕಲ್‌ನಿಂದ ಕಾಂಗ್ರೆಸ್‌ (Congress) ಮುಖಂಡರು ಅರ್ಧ ಕಿಲೋಮೀಟರ್‌ ಪಾದಯಾತ್ರೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Bengaluru: ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ, ನೆರವಾದ ರೈಲ್ವೆ ಸಿಬ್ಬಂದಿ

ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ, ನೆರವಾದ ಸಿಬ್ಬಂದಿ

Viral News: 23 ವರ್ಷದ ಅರ್ಚನಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಆರ್‌ಪಿಎಫ್ ಕಾನ್‌ಸ್ಟೆಬಲ್ ಅಮೃತ ಎಂಬವರು ಘಟನೆ ವೇಳೆ ಯಾವುದೇ ಅಪಾಯವಿಲ್ಲದೆ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ನೆರವಾದರು.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 1st Aug 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,150 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 21 ರೂ ಇಳಿಕೆ ಕಂಡಿದ್ದು, 9,982 ರೂ. ಆಗಿದೆ.

Murder Case: ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

Koppala Crime News: ನೇತ್ರಾವತಿಗೆ ಬೂದಗುಂಪ ಗ್ರಾಮದ ದ್ಯಾಮಣ್ಣ ಜೊತೆ ಮದುವೆ ಆಗಿ, ಮೂರು ಮಕ್ಕಳು ಆಗಿದ್ದರೂ ಶ್ಯಾಮಣ್ಣ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ ಇಬ್ಬರೂ ಕೊಲೆ ಸಂಚು ರೂಪಿಸಿದ್ದಾರೆ.

Prajwal Revanna‌ case: ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪು

ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಪ್ರಕರಣದ ತೀರ್ಪು

Physical Abuse: ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

Murder case: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೆರೆಗೆ ತಳ್ಳಿ ಕೊಂದ ಪತ್ನಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೆರೆಗೆ ತಳ್ಳಿ ಕೊಂದ ಪತ್ನಿ

Haveri news: ಶಫೀವುಲ್ಲಾನನ್ನು ಕೆರೆಗೆ ತಳ್ಳಿದ್ದಾರೆ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದರು. ಮೃತದೇಹ ಪತ್ತೆಯಾದ ಬಳಿಕ, ದೇಹದಲ್ಲಿ ಗಾಯಗಳಿರುವುದು ಕಂಡು ಅನುಮಾನ ಮೂಡಿತ್ತು. ಪೊಲೀಸರ ತನಿಖೆ ವೇಳೆ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ ಸಂಚು ಬಯಲಾಗಿದೆ.

ಬೆಂಗಳೂರಿನಲ್ಲಿ ಊರ್ಜಾ ಅವರಿಂದ ಸಾಂಗ್ಸ್ ಆಫ್ ನೇಚರ್ ಪ್ರದರ್ಶನ

ಬೆಂಗಳೂರಿನಲ್ಲಿ ಊರ್ಜಾ ಅವರಿಂದ ಸಾಂಗ್ಸ್ ಆಫ್ ನೇಚರ್ ಪ್ರದರ್ಶನ

ಕೇವಲ ಪ್ರದರ್ಶನ ಮಾತ್ರವಲ್ಲ ಶೇಡ್ಸ್ ಆಫ್ ಗ್ರೀನ್ ಸಂವಾದಕ್ಕೆ ಒಂದು ವೇದಿಕೆ ಕಲ್ಪಿಸಿದೆ. ಕಲಾವಿದರು, ವಿನ್ಯಾಸಕರು ಮತ್ತು ಪರಿಸರ ಚಿಂತಕರೊಂದಿಗೆ ಸೇರಿ ವಾರವಿಡೀ ಸುಸ್ಥಿರ ಸೃಜನಶೀಲತೆಯ ಆಯಾಮ ಗಳನ್ನು ಅನ್ವೇಷಿಸುವ ಮಾತುಕತೆಗಳು ಮತ್ತು ಕಾರ್ಯಾಗಾರಗಳು ನಡೆಯಲಿವೆ.

Bengaluru Stampede: ಕಾಲ್ತುಳಿತ ಪ್ರಕರಣದಲ್ಲಿ ಅಮಾನತಾಗಿದ್ದ ಪೊಲೀಸ್‌ ಅಧಿಕಾರಿಗಳಿಗೆ ಸ್ಥಳ ನಿಯೋಜನೆ

ಕಾಲ್ತುಳಿತ ಪ್ರಕರಣ; ಅಮಾನತಾಗಿದ್ದ ಪೊಲೀಸ್‌ ಅಧಿಕಾರಿಗಳಿಗೆ ಸ್ಥಳ ನಿಯೋಜನೆ

Chinnaswamy Stampede: ಬಿ. ದಯಾನಂದ್​ ಅವರಿಗೆ ಬಹಳ ದೊಡ್ಡ ಜವಾಬ್ದಾರಿ ನೀಡಲಾಗಿದೆ. ಈ ಹಿಂದೆ ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದಾಗ ಇವರ ಮೇಲೆ ಮಹಾನಿರ್ದೇಶಕರು ಇದ್ದರು. ಆದರೆ ಈಗ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಎಡಿಜಿಪಿಯಾಗಿ ಮಾಡಲಾಗಿದೆ.

MUDA Scam: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಕ್ಲೀನ್‌ ಚಿಟ್

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್‌ ಚಿಟ್

CM Siddaramaiah: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ನಿನ್ನೆ (ಜುಲೈ 31) ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ನೀಡಿದ್ದಾರೆ.

Student Murder Case: ಬಾಲಕನ ಕಿಡ್ನಾಪ್ ಮಾಡಿ, ಪೊಲೀಸರಿಗೆ ತಿಳಿಸಿದ್ದಕ್ಕೆ ಕೊಂದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಲಕನ ಕಿಡ್ನಾಪ್, ಪೊಲೀಸರಿಗೆ ತಿಳಿಸಿದ್ದಕ್ಕೆ ಕೊಂದು ಸುಟ್ಟುಹಾಕಿದ ಪಾಪಿಗಳು

Kidnap: ಅರಕೆರೆ ಶಾಂತಿನಿಕೇತನ ಲೇಔಟ್​ನಿಂದ ನಿಶ್ಚಿತ್​ ಎಂಬ ವಿದ್ಯಾರ್ಥಿಯನ್ನು (12) ಅಪಹರಿಸಲಾಗಿದ್ದು, ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಬಾಲಕನ ತಂದೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅಪಹರಣಕಾರರು ಬಾಲಕನನ್ನು ಕೊಂದು ಬಳಿಕ ಸುಟ್ಟು ಹಾಕಿದ್ದಾರೆ.

LPG Cylinder Price Cut: ಸಿಹಿ ಸುದ್ದಿ, ಎಲ್‌ಪಿಜಿ ಸಿಲಿಂಡರ್ ಬೆಲೆ 33.50 ರೂ. ಕಡಿತ

ಸಿಹಿ ಸುದ್ದಿ, ಎಲ್‌ಪಿಜಿ ಸಿಲಿಂಡರ್ ಬೆಲೆ 33.50 ರೂ. ಕಡಿತ

ದೇಶಾದ್ಯಂತ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ಸುಮಾರು 33.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ವಾಣಿಜ್ಯ LPG ಸಿಲಿಂಡರ್‌ನ ಹೊಸ ಬೆಲೆ ಆಗಸ್ಟ್ 1ರ ಇಂದಿನಿಂದ ಜಾರಿಗೆ ಬರಲಿದೆ. ಈ ಬೆಲೆ ಕಡಿತ ಎಲ್ಲ ಮಹಾನಗರಗಳಿಗೆ ಅನ್ವಯವಾಗಲಿದೆ.

Nikhil Kumaraswamy: ಉಡಾಫೆ ಮಾತು ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ

ಜನತಾದಳದ ಕಾರ್ಯಕರ್ತರು ನಿಷ್ಠಾವಂತರು: ನಿಖಿಲ್

ಶಿವ ಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

DK Shivakumar: ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ: ಡಿಕೆಶಿ

ಮತಗಳ್ಳತನದ ವಿರುದ್ಧ ಆಗಸ್ಟ್ 5ರಂದು ಪ್ರತಿಭಟನೆ: ಡಿಕೆಶಿ

DK Shivakumar: ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Quantum city: ಬೆಂಗಳೂರಿನಲ್ಲಿ ಕ್ವಾಂಟಮ್ ಸಿಟಿ ಸ್ಥಾಪನೆ: ಎನ್.ಎಸ್.ಭೋಸರಾಜು

ಬೆಂಗಳೂರಿನಲ್ಲಿ ಕ್ವಾಂಟಮ್ ಸಿಟಿ ಸ್ಥಾಪನೆ: ಎನ್.ಎಸ್.ಭೋಸರಾಜು

ಕ್ವಾಂಟಮ್ ಕಂಪ್ಯೂಟರ್ ವಲಯದಲ್ಲಿ 2 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ 2035ರ ವೇಳೆಗೆ ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ಶೇ. 20ರಷ್ಟು ಪಾಲನ್ನು ಕರ್ನಾಟಕದ್ದಾಗಿಸಲು ಗುರಿ ಇಟ್ಟುಕೊಂಡು ಅದಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.

Dharmasthala: ಧರ್ಮಸ್ಥಳ ಪ್ರಕರಣ; ಫಸ್ಟ್ ಸ್ಪಾಟ್‌ನಲ್ಲಿ ದೊರೆತ ಎಟಿಎಂ ಗುರುತು ಪತ್ತೆ; ಆತ ಸಾವನಪ್ಪಿದ್ದು ಜಾಂಡಿಸ್‌ನಿಂದ ಎಂದ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣ; 6ನೇ ಸ್ಥಳದಲ್ಲಿ ಮೂಳೆಗಳು ಪತ್ತೆ

ದಿನದಿಂದ ದಿನಕ್ಕೆ ಧರ್ಮಸ್ಥಳ ಪ್ರಕರಣ ತೀವ್ರ ತಿರುವು ಪಡೆದುಕೊಳ್ಳುತ್ತಿದ್ದು, ಮೊದಲ ಸ್ಥಳದಲ್ಲಿ ಅಗೆಯುವಾಗ ಪತ್ತೆಯಾಗಿದ್ದ ಪ್ಯಾನ್‌ ಕಾರ್ಡ್ ಬಗ್ಗೆ ಮಾಹಿತಿ ಹೊರಗೆ ಬಿದ್ದಿದೆ. ಆ ಕಾರ್ಡ್ ಪುರುಷರೊಬ್ಬರದ್ದು ಎಂದು ತಿಳಿದು ಬಂದಿದ್ದು, ಎಸ್‌ಐಟಿ ತಂಡವು ಈ ವ್ಯಕ್ತಿಯ ಕುಟುಂಬವನ್ನು ಪತ್ತೆಹಚ್ಚಿದೆ. ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುರೇಶ್ ಎಂಬ ವ್ಯಕ್ತಿಯದ್ದೆಂದು ಗೊತ್ತಾಗಿದೆ.

Loading...