ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
Bengaluru airport: ಅನಾಮಧೇಯ ವ್ಯಕ್ತಿ ಬಾಂಬ್ ಬೆದರಿಕೆ ಹಾಕಿದ್ದು, ಬೆಂಗಳೂರು ಏರ್ಪೋರ್ಟ್ನ ಟರ್ಮಿನಲ್-1ರ ತೀವ್ರ ಭದ್ರತಾ ಪರಿಶೀಲನೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆಯೂ ಇಂಥಹದ್ದೇ ಘಟನೆ ನಡೆದಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಹ್ಮದಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿತ್ತು. ಇದೀಗ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿರುವುದು ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.